ಪ್ರೀತಿಸುವಂತೆ ಜೆಡಿಎಸ್ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳದಿಂದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.