ರಾಜ್ಯದಲ್ಲಿ ಇಂದು ಸುರಿಯಲಿದೆ ಗುಡುಗು ಸಹಿತ ಮಳೆ
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜತೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.