ಮಮತಾ ಬ್ಯಾನರ್ಜಿ ಬೆಂಗಾವಲು ಪಡೆ ಮೇಲಿನ ದಾಳಿ ಬಗ್ಗೆ ಬಿಜೆಪಿಯಿಂದ ಸ್ಪಷ್ಟನೆ
Mamata Banerjee: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೆಂಗಾವಲು ಪಡೆಯ ವಾಹನದ ಮೇಲೆ ನಡೆದ ದಾಳಿ ಭಾರಿ ಸಂಚಲನ ಮೂಡಿಸಿದೆ. ಇದೀಗ ಈ ಬಗ್ಗೆ ಮಾತನಾಡಿದ ಬಿಜೆಪಿ ನಾಯಕರು, ತಮಗೂ ಈ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.