ಸಚಿನ್ ದಾಖಲೆ ಮೇಲೆ ವಿರಾಟ್ ಕೊಹ್ಲಿ ಕಣ್ಣು!
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ಒಂದೇ ಒಂದು ಶತಕ ಬಾರಿಸಿದರೆ, ದಕ್ಷಿಣ ಆಫ್ರಿಕಾ ಎದುರು ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.