ನಾಲ್ಕನೇ ಕ್ರಮಾಂಕದಲ್ಲಿ ವಿಶೇಷ ದಾಖಲೆ ಬರೆದ ಶ್ರೇಯಸ್ ಅಯ್ಯರ್!
ಇಂಗ್ಲೆಂಡ್ ವಿರುದ್ಧದ ಮೊದಲನೇ ಏಜದಿನ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅವರು ನಾಲ್ಕನೇ ಕ್ರಮಾಂಕದಲ್ಲಿ 100ಕ್ಕೂ ಅಧಿಕ ಸ್ಟ್ರೈಕ್ ರೇಟ್‌ನಲ್ಲಿ 1000ಕ್ಕಿಂತ ಅಧಿಕ ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.