ಮೆಟ್ರೋ ಪ್ರಯಾಣ ದರ, ನೀರಿನ ದರ ಹೆಚ್ಚಳದ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಈಗಾಗಲೇ ನಿಗಮವು ಒಂದು ತೀರ್ಮಾನ ತೆಗೆದುಕೊಂಡಿದೆ. ನಾನು ಆ ವರದಿಯಲ್ಲಿ ಏನಿದೆ ಎಂದು ಮೂಗು ತೂರಿಸಲು ಹೋಗುವುದಿಲ್ಲ ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕುಡಿಯುವ ನೀರಿನ ದರ ಏರಿಕೆ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದೆ ಇಡಲಾಗುವುದು ಎಂದು ತಿಳಿಸಿದ್ದಾರೆ.