ರಸ್ತೆ ಅಪಘಾತಕ್ಕೆ ಶಾಕುನ್ ಗ್ರೂಪ್ ಎಂಡಿ ವಲ್ಲಭ ಮಹೇಶ್ವರಿ ಬಲಿ
ಶಾಕುನ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ವಲ್ಲಭ ಮಹೇಶ್ವರಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಜಸ್ಥಾನದ ಅಲ್ವಾರ್ ಬಳಿ ಅವರು ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.