ಬೀದರ್: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋವಿಡ್ ಸೋಂಕು ತಗುಲಿದ ಬಳಿಕ ಶಾಸಕರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸೋಂಕು ತಗುಲಿರುವ ನಾರಾಯಣರಾವ್ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
66 ವರ್ಷದ ನಾರಾಯಣರಾವ್ಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿಂದ ನರಳುತ್ತಿದ್ದಾರೆ. ಇದರಿಂದಾಗಿ, ಆಸ್ಪತ್ರೆಗೆ ದಾಖಲಾದ ಎರಡೇ ದಿನಕ್ಕೆ ಅವರ ಸ್ಥಿತಿ ಗಂಭೀರವಾಗಿತ್ತು. ಅಂದಿನಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾ ಗುತ್ತಿದೆ.