Sunday, 24th January 2021

ಬಿಬಿಎಂಪಿ ಚುನಾವಣೆ: ನಾಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ

ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸುವಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಅಂತಿಮ ತೀರ್ಪನ್ನು ನಾಳೆಗೆ ಹೈಕೋರ್ಟ್ ಕಾಯ್ದಿರಿಸಿರುವ ಹಿನ್ನೆಲೆಯಲ್ಲಿ ನಾಳೆಯ ತೀರ್ಪಿನತ್ತ ಎಲ್ಲರ ಕುತೂಹಲ ಕೆರಳಿದೆ.

198 ವಾರ್ಡ್ ಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಸಿದ್ಧಪಡಿಸಿಕೊಂಡಿದೆ.

ಹೀಗಾಗಿ ಚುನಾವಣೆ ನಡೆಸಲು ಅವಕಾಶ ನೀಡಬೇಕೆಂದು ಚುನಾವಣಾ ಆಯೋಗ ನ್ಯಾಯಾಲಯದ ಮುಂದೆ ಪ್ರಬಲ ವಾದ ಮಂಡಿಸಿದೆ. ಅಲ್ಲದೆ, ಸಕಾಲದಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಆಯೋಗ ಸ್ಪಷ್ಟಪಡಿಸಿದೆ.

198 ವಾರ್ಡ್‍ಗಳಿರುವ ಬಿಬಿಎಂಪಿಯಲ್ಲಿ 243 ವಾರ್ಡ್‍ಗಳನ್ನು ಹೆಚ್ಚಿಸಲು ಮಸೂದೆ ಮಂಡಿಸಲಾಗಿದೆ. ಇದಕ್ಕೆ ಕಾಲಾವಕಾಶ ಬೇಕು. ಅಲ್ಲದೆ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ ಮಾಡಬೇಕಾಗಿದೆ ಎಂದು ಸರ್ಕಾರ ನ್ಯಾಯಾಲಯದ ಮುಂದೆ ಕಾಲಾ ವಕಾಶ ಕೇಳಿದೆ.

ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಬೇಕೆಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಲ್ಲ ವಾದ-ವಿವಾದ ಆಲಿಸಿ ರುವ ನ್ಯಾಯಾಲಯ ಶುಕ್ರವಾರ ಮಧ್ಯಾಹ್ನ ತೀರ್ಪು ಪ್ರಕಟಿಸಲಿದೆ.

 

Leave a Reply

Your email address will not be published. Required fields are marked *