ಬೆಂಗಳೂರಿನಲ್ಲಿ ಹಳೇ ಪದ್ಧತಿಯಲ್ಲೇ ಇ-ಖಾತಾ ನೀಡುತ್ತೇವೆ: ಡಿ.ಕೆ.ಶಿವಕುಮಾರ್
Karnataka Winter Session: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಇ-ಖಾತಾ ಬಗ್ಗೆ ಶಾಸಕ ಗೋಪಾಲಯ್ಯ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ಇದೇ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ 2 ದಿಕ್ಕುಗಳಲ್ಲಿ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.