RCB vs DC: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ವಾಹನ ನಿಲುಗಡೆ ನಿಷೇಧ
Bengaluru Traffic Alert: ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.