ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಂಗಳೂರು ಗ್ರಾಮಾಂತರ
Nelamangala CMC: ಸರ್ಕಾರದ ಆದೇಶಕ್ಕೆ ಸಿಗದ ಕಿಮ್ಮತ್ತು; ನೆಲಮಂಗಲ ನಗರಸಭೆಯಲ್ಲಿ ಹೆಚ್ಚಿದ ಬ್ರೋಕರ್‌ಗಳ ಹಾವಳಿ

ನೆಲಮಂಗಲ ನಗರಸಭೆಯಲ್ಲಿ ಹೆಚ್ಚಿದ ಬ್ರೋಕರ್‌ಗಳ ಹಾವಳಿ

Nelamangala CMC: ನೆಲಮಂಗಲದಲ್ಲಿ ಬಿ-ಖಾತಾ ಆಂದೋಲನದ ಮೂಲಕ ಕೆಲವು ನಗರಸಭೆ ಸದಸ್ಯರು ಹಾಗೂ ಕೆಲವು ಬ್ರೋಕರ್‌ಗಳು ಹಣ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ವಾರ್ಡ್‌ಗಳಲ್ಲಿನ ನಿವಾಸಿಗಳಿಗೆ ತಪ್ಪು ಮಾಹಿತಿಯನ್ನು ನೀಡಿ ಖಾತೆ ಮಾಡಿಸಲು 10 ರಿಂದ 15 ಸಾವಿರ ಹಣವನ್ನು ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Pralhad Joshi: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

Pralhad Joshi: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್‌ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Nandi Hills: ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Murder Case: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಕೊಲೆ, ಕೊಲೆ ಹಿಂದೆ ಲವ್‌ ಸ್ಟೋರಿ

ಮಾರಕಾಸ್ತ್ರಗಳಿಂದ ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ, ಲವ್‌ ಸ್ಟೋರಿ ಕಾರಣ?

ತಂದೆ-ತಾಯಿಯನ್ನು ಕಳೆದುಕೊಂಡಿದ್ದ‌ ಲೋಕನಾಥ್ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡಿಕೊಂಡಿದ್ದ. ಒಬ್ಬ ತಮ್ಮನಿಗೆ ಮದುವೆ ಮಾಡಿ ತಾನೂ ಮದುವೆಗೆ ಸಿದ್ದವಾಗಿದ್ದ.‌ ಲೋಕನಾಥ್ ಹುಡುಗಿಯೊಬ್ಬಳ ಪ್ರೇಮಪಾಶಕ್ಕೆ ಬಿದ್ದಿದ್ದು, ಅದರಿಂದಲೇ ಈ ಘಟನೆ ಆಗಿರಬಹುದು ಎಂದು ಕುಟುಂಬಸ್ಥರು ದೂರಿದ್ದಾರೆ.

ನೆಲಮಂಗಲದಲ್ಲಿ 100 ಹಾಸಿಗೆಯ ಸುಸಜ್ಜಿತ ಆಸ್ಪತ್ರೆಗೆ ಶೀಘ್ರದಲ್ಲೇ ಭೂಮಿ ಪೂಜೆ: ಶಾಸಕ ಎನ್. ಶ್ರೀನಿವಾಸ್

100 ಹಾಸಿಗೆಯ ಆಸ್ಪತ್ರೆಗೆ ಶೀಘ್ರದಲ್ಲೇ ಭೂಮಿ ಪೂಜೆ: ಶಾಸಕ ಎನ್. ಶ್ರೀನಿವಾಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಈಶ್ವರ ಸ್ವರೂಪಿ ಶ್ರೀ ಮುನೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎನ್. ಶ್ರೀನಿವಾಸ್ ಮಾತನಾಡಿದ್ದಾರೆ. ನೆಲಮಂಗಲದಲ್ಲಿ 2 ಎಕರೆ 30 ಗುಂಟೆ ಜಾಗದಲ್ಲಿ 32.5 ಕೋಟಿ ವೆಚ್ಚದ ತಾಲೂಕು ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Huskur Jatre: ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅನಾಹುತ; ತೇರು ಉರುಳಿ ಬಿದ್ದು ವ್ಯಕ್ತಿ ಸಾವು

ಹುಸ್ಕೂರು ಮದ್ದೂರಮ್ಮ ತೇರು ಉರುಳಿ ಬಿದ್ದು ವ್ಯಕ್ತಿ ಸಾವು

Huskur Jatre: ಆನೇಕಲ್‌ ತಾಲೂಕಿನ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ದುರ್ಘಟನೆ ನಡೆದಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ. ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ತೇರು ಎಳೆದು ತರುವಾಗ ಅವಘಡ ಸಂಭವಿಸಿದೆ.

Physical Abuse: ಮಗಳನ್ನೇ ಹುರಿದು ಮುಕ್ಕಿದ ಕಾಮಪಿಶಾಚಿ ತಂದೆ ಬಂಧನ

ಮಗಳನ್ನೇ ಹುರಿದು ಮುಕ್ಕಿದ ಕಾಮಪಿಶಾಚಿ ತಂದೆ ಬಂಧನ

19 ವರ್ಷ ವಯಸ್ಸಿನ ಮಗಳ‌ ಮೇಲೆ ತಂದೆ ಮಂಜುನಾಥ ಅತ್ಯಾಚಾರ ಮಾಡಿದ್ದರ ಜತೆಗೆ ಈ ವಿಷಯವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಆಕೆಗೆ ಬೆದರಿಕೆಯನ್ನೂ ಹಾಕಿದ್ದಾನೆ. ತಂದೆಯ ಕಾಟ, ಬೆದರಿಕೆ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡುತ್ತಿದ್ದಳು.

Puneeth Rajkumar Birthday: ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ಹಿರಿಯ ನಾಗರಿಕರಿಗೆ ವಾಕರ್ ವಿತರಿಸಿದ ನಟ ವಿನೋದ್ ರಾಜ್

ಪುನೀತ್ ಹುಟ್ಟುಹಬ್ಬ; ಹಿರಿಯ ನಾಗರಿಕರಿಗೆ ವಾಕರ್ ವಿತರಿಸಿದ ನಟ ವಿನೋದ್ ರಾಜ್

Puneeth Rajkumar Birthday: ನೆಲಮಂಗಲದ ಮಂಚೇನಹಳ್ಳಿ ಗ್ರಾಮದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಯುವಕರ ಸಂಘದಿಂದ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಸೋಮವಾರ ಆಚರಣೆ‌ ಮಾಡಲಾಗಿತ್ತು. ಈ ವೇಳೆ ವಿನೋದ್ ರಾಜ್ ಅವರು, ಹಿರಿಯ ನಾಗರಿಕರಿಗೆ ವಾಕರ್‌ಗಳನ್ನು ವಿತರಿಸಿದ್ದಾರೆ.

Assault Case: ಬೆಂಗಳೂರಲ್ಲಿ ಅಮಾನವೀಯ ಘಟನೆ; ವ್ಯಕ್ತಿಗೆ ಸನ್ಮಾನ ಮಾಡಿ, ಮನಸೋ ಇಚ್ಛೆ ಹಲ್ಲೆ

ವ್ಯಕ್ತಿಗೆ ಸನ್ಮಾನ ಮಾಡಿ, ಮನಸೋ ಇಚ್ಛೆ ಹಲ್ಲೆ

Assault Case: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಘಟನೆ ನಡೆದಿದೆ. ವ್ಯಕ್ತಿ ಅಸಹಾಯಕವಾಗಿ ಕುಳಿತಿದ್ದಾಗ ಆತನಿಗೆ ಇಬ್ಬರು ವ್ಯಕ್ತಿಗಳು ಶಾಲು ಹೊದಿಸಿ ಸನ್ಮಾನಿಸಿ, ಹಲ್ಲೆ ಮಾಡಲಾಗಿದೆ. ಸದ್ಯ ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಆರ್‌ಟಿಒ ಕಚೇರಿಯಲ್ಲಿ ಸರ್ಕಾರಿ ವಹಿಗೆ ಖಾಸಗಿ ವ್ಯಕ್ತಿ ಸಹಿ; ಬಂಧನಕ್ಕೆ ಉಪ ಲೋಕಾಯುಕ್ತ ಆದೇಶ

ಸರ್ಕಾರಿ ವಹಿಗೆ ಖಾಸಗಿ ವ್ಯಕ್ತಿ ಸಹಿ; ಬಂಧನಕ್ಕೆ ಆದೇಶ

ಹೊಸಪೇಟೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ವಾಹನ ನೋಂದಣಿ ನವೀಕರಣ ಸ್ವೀಕೃತಿ ವಹಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ನಿರಂತರವಾಗಿ ಸಹಿ ಮಾಡಿರುವುದನ್ನು ಪತ್ತೆಹಚ್ಚಿ, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

Weather Forecast: ಇಂದಿನ ಹವಾಮಾನ; ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಇಂದಿನ ಹವಾಮಾನ; ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 48 ಗಂಟೆಗಳ ಕಾಲ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 18°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru 2nd Airport: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ, ಕೇಂದ್ರಕ್ಕೆ ರಾಜ್ಯ ಪ್ರಸ್ತಾವನೆ

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ, ಕೇಂದ್ರಕ್ಕೆ ಪ್ರಸ್ತಾವನೆ

ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಕೇಂದ್ರಕ್ಕೆ ಪ್ರಸ್ತಾಪಿಸಲಾಗಿದೆ. ಕನಕಪುರ ರಸ್ತೆ ಹಾರೋಹಳ್ಳಿ ಬಳಿ ಎರಡು ಕಡೆ ಹಾಗೂ ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಕಡೆ ಸ್ಥಳ ಗುರುತಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

Tejsvi Surya Marriage: ಸಪ್ತಪದಿ ತುಳಿದ ತೇಜಸ್ವಿ ಸೂರ್ಯ-  ಶಿವಶ್ರೀ ಸ್ಕಂದಪ್ರಸಾದ್‌

ಸಪ್ತಪದಿ ತುಳಿದ ತೇಜಸ್ವಿ ಸೂರ್ಯ- ಶಿವಶ್ರೀ ಸ್ಕಂದಪ್ರಸಾದ್‌

ಬುಧವಾರ ಸಂಜೆಯಿಂದಲೇ ತೇಜಸ್ವಿ ಸೂರ್ಯ ಮನೆಯಲ್ಲಿ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ಗವು. ಇಂದು ಮಾಂಗಲ್ಯ ಧಾರಣೆ, ಕನ್ಯಾದಾನ ಶಾಸ್ತ್ರಗಳು ಸಾಂಪ್ರದಾಯಿಕ ರೀತಿಯಲ್ಲಿ ನೆರವೇರಿದವು. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ಕೂಡ ನಡೆಯಲಿದೆ ಎಂದು ತಿಳಿದುಬಂದಿದೆ. ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಮದುವೆಯ ಆರತಕ್ಷತೆ ನಡೆಯಲಿದೆ.

Fraud case: ಪಿಎಸ್‌ಐ ಹುದ್ದೆ ಕೊಡಿಸುವುದಾಗಿ 45 ಲಕ್ಷ ವಂಚನೆ; ವೈದ್ಯ ಸೇರಿ ಇಬ್ಬರ ಬಂಧನ

ಪಿಎಸ್‌ಐ ಹುದ್ದೆ ಕೊಡಿಸುವುದಾಗಿ 45 ಲಕ್ಷ ವಂಚನೆ; ವೈದ್ಯ ಸೇರಿ ಇಬ್ಬರ ಬಂಧನ

Fraud case: ಈ ಹಿಂದೆ ಕೋವಿಡ್ ಚಿಕಿತ್ಸೆಗೆ ಅನುಮತಿ ಇಲ್ಲದೆ ಚಿಕಿತ್ಸೆ ನೀಡಿ ಹಲವರ ಸಾವಿಗೆ ಕಾರಣವಾಗಿದ್ದ ವೈದ್ಯನ ವಿರುದ್ಧ ಜಿಲ್ಲಾಧಿಕಾರಿ ಆಸ್ಪತ್ರೆ ಮುಚ್ಚುವಂತೆ ಆದೇಶಿಸಿದ್ದರು. ಈ ಮೂಲಕ ಸುದ್ದಿಯಾಗಿದ್ದ ವೈದ್ಯ ಇದೀಗ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.

Bed Sheet Gang: ಬೆಡ್‌ ಶೀಟ್‌ ಗ್ಯಾಂಗ್‌ ಮತ್ತೆ ಆಕ್ಟೀವ್‌; ಕೇವಲ 6 ನಿಮಿಷದಲ್ಲೇ 30 ಲಕ್ಷ ರೂ.ಗೆ ಕನ್ನ

6 ನಿಮಿಷದಲ್ಲೇ 30 ಲಕ್ಷ ರೂ ಎಗರಿಸಿದ ಬೆಡ್‌ಶೀಟ್‌ ಗ್ಯಾಂಗ್‌

ಸೂಲಿಬೆಲೆಯ ಪ್ರಮುಖ ವೃತ್ತ ಹಾಗೂ ಪೊಲೀಸ್ ಠಾಣೆಯಿಂದ ಜಸ್ಟ್ 500 ಮೀಟರ್ ದೂರದಲ್ಲಿರುವ ಎಸ್​ಬಿಐ ಎಟಿಎಂನಲ್ಲಿ ತಡರಾತ್ರಿ 5 ಜನರ ಬೆಡ್ ಶೀಟ್ ಗ್ಯಾಂಗ್ ಕೊಳ್ಳೆ ಹೊಡೆದಿದೆ. ಮೊದಲಿಗೆ ಓರ್ವ ಕಾರಿನಿಂದಲೇ ಸಂಪೂರ್ಣವಾಗಿ ತಲೆ ಕೈ ಕಾಲಿಗೆಲ್ಲ ಬೆಡ್ ಶೀಟ್​​ ಹಾಕಿಕೊಂಡು ಎಟಿಎಂ ಶೆಟರ್ ಮುರಿದು ಒಳಬಂದು ನಂತರ ಎಲ್ಲಾ ಕ್ಯಾಮರಾಗಳಿಗೆ ಬ್ಲಾಕ್ ಕಲರ್ ಸ್ಪ್ರೇ ಹೊಡೆದಿದ್ದಾನೆ. ಅಷ್ಟರಲ್ಲಿ ಕಾರಿಂದ ಇಳಿದು ಬಂದ ಮತ್ತೆ ನಾಲ್ವರು ಆರೋಪಿಗಳು ಹಣ ದೋಚಿದ್ದಾರೆ.

Fraud Case: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ, ಲಕ್ಷಾಂತರ ರೂ. ವಂಚನೆ: ಆರೋಪಿ ಬಂಧನ

ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ, ವಂಚನೆ: ಆರೋಪಿ ಬಂಧನ

ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭ ಕೊಡುವುದಾಗಿ ನಂಬಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ಪಡೆದು, ಯಾವುದೇ ಲಾಭವನ್ನು ಕೊಡದೇ ವಂಚಿಸಿ, ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹಾವೇರಿ ಸಿಇಎನ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.

Murder Case: ಬೆಂಗಳೂರಲ್ಲಿ ಮತ್ತೊಂದು ಬರ್ಬರ ಹತ್ಯೆ, ಸೆಕ್ಯೂರಿಟಿ ಗಾರ್ಡ್ ಕೊಲೆ

ಬೆಂಗಳೂರಲ್ಲಿ ಮತ್ತೊಂದು ಬರ್ಬರ ಹತ್ಯೆ, ಸೆಕ್ಯೂರಿಟಿ ಗಾರ್ಡ್ ಕೊಲೆ

ಬ್ಯಾಟರಾಯನಪುರದ ಗಾರ್ಮೆಂಟ್‌ನಲ್ಲಿ ಗಣೇಶ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಆರೋಪಿಗಳಿಗಾಗಿ ಸದ್ಯ ಪೋಲಿಸಲು ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nelamangala News: ನೆಲಮಂಗಲ: ಶಾಲೆಯ ಚಾವಣಿ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಶಾಲೆಯ ಚಾವಣಿ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಮಧ್ಯಾಹ್ನದ ಬಿಸಿಯೂಟ ಮಾಡುತ್ತಿದ್ದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಚಾವಣಿ ಕುಸಿದು ಬಿದ್ದಿರುವ ಆಘಾತಕಾರಿ ಘಟನೆ ಗುರುವಾರ (ಫೆ. 27) ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುವಿನ ಹೊಸ ಕಾಲೋನಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ಅಡುಗೆ ಸಹಾಯಕಿ ಗಾಯಗೊಂಡಿದ್ದಾರೆ.

Murder Case: ಪತ್ನಿಯ ಶೀಲ ಶಂಕಿಸಿ ಕೊಂದು, ಸುಟ್ಟುಹಾಕಲು ಯತ್ನಿಸಿದ ದುರುಳ ಆರೆಸ್ಟ್

ಪತ್ನಿಯ ಶೀಲ ಶಂಕಿಸಿ ಕೊಂದು, ಸುಟ್ಟುಹಾಕಲು ಯತ್ನಿಸಿದ ದುರುಳ ಆರೆಸ್ಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದ ಲಕ್ಷ್ಮಯ್ಯ ಎಂಬಾತ ತನ್ನ ಪತ್ನಿ ರಾಧಮ್ಮ (45) ಳನ್ನು ಕೊಲೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಪತ್ನಿಯ ಜೊತೆಗೆ ಗಲಾಟೆ ಮಾಡಿದ್ದ ಲಕ್ಷ್ಮಯ್ಯ ಗಲಾಟೆಯ ವೇಳೆ ಪತ್ನಿಯ ತಲೆಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾನೆ.

Murder Case: ಪತ್ನಿಯ ಜೊತೆ ಸಲಿಗೆ ಬೆಳೆಸಿದ ಗೆಳೆಯನಿಗೆ ಇರಿದು ಹತ್ಯೆ

ಪತ್ನಿಯ ಜೊತೆ ಸಲಿಗೆ ಬೆಳೆಸಿದ ಗೆಳೆಯನಿಗೆ ಇರಿದು ಹತ್ಯೆ

ಗೆಳೆಯ ಪತ್ನಿಯ ಮನೆಗೆ ಬಂದಾಗ ಆರೋಪಿ ಜಗಳವಾಡಿ, ಆತನಿಗೆ ಹಲವು ಬಾರಿ ಇರಿದಿದ್ದಾನೆ. ನಂತರ ಅಪರಾಧ ನಡೆದ ಸ್ಥಳದಲ್ಲಿಯೇ ಕುಳಿತಿದ್ದು, ತಪ್ಪಿಸಿಕೊಳ್ಳಲು ಯಾವುದೇ ಪ್ರಯತ್ನ ಮಾಡಿರಲಿಲ್ಲ. ದಾರಿಹೋಕರೊಬ್ಬರು ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದರು.

ಒಂದೇ ಕಾಮಗಾರಿಗೆ ಮತ್ತೆ ಭೂಮಿ ಪೂಜೆ; ಶಾಸಕ ಎನ್.ಶ್ರೀನಿವಾಸ್ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ

ಒಂದೇ ಕಾಮಗಾರಿಗೆ ಮತ್ತೆ ಭೂಮಿ ಪೂಜೆ; ಶಾಸಕನ ವಿರುದ್ಧ ಬಿಜೆಪಿ ಕಿಡಿ

ನೆಲಮಂಗಲದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರು, ಶಾಸಕ ಎನ್.ಶ್ರೀನಿವಾಸ್ ವಿರುದ್ಧ ಕಿಡಿಕಾರಿದ್ದಾರೆ. ಡಿಸಿಎಂ ಶಂಕು ಸ್ಥಾಪನೆ ಮಾಡಿದ ಯೋಜನೆಗೆ ಮತ್ತೆ ಭೂಮಿ ಪೂಜೆ ಮಾಡುತ್ತಿರುವುದು ಸಿಎಂ ಹಾಗೂ ಡಿಸಿಎಂಗೆ ಮಾಡಿದ ಅವಮಾನ. ಶಾಸಕರು ಪ್ರಚಾರಕ್ಕಾಗಿ, ಜನರನ್ನು ಶಾಸಕರು ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಕಿಡಿಕಾರಿದ್ದಾರೆ.

ರೀಲ್ಸ್‌ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಯುವಕರ ಸಾವು

ರೀಲ್ಸ್‌ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಸಾವು

ರೀಲ್ಸ್​ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Road Accident: ಪಾನಮತ್ತರಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು

ಪಾನಮತ್ತರಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು

ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಪಾನಮತ್ತರಾಗಿದ್ದರು ಎಂದು ಗೊತ್ತಾಗಿದೆ.

Nelamangala News: ವಿಶ್ವ ಗಾಣಿಗ ಸಮುದಾಯ ಟ್ರಸ್ಟ್‌ಗೆ ಅನುದಾನ ಬಿಡುಗಡೆಗೆ ಸಚಿವ ತಂಗಡಗಿ ತಾರತಮ್ಯ: ಪೂರ್ಣಾನಂದಪುರಿ ಶ್ರೀ ಆರೋಪ

ಟ್ರಸ್ಟ್‌ಗೆ ಅನುದಾನ ಬಿಡುಗಡೆಗೆ ತಾರತಮ್ಯ: ಪೂರ್ಣಾನಂದಪುರಿ ಶ್ರೀ

Nelamangala News: ವಿಶ್ವ ಗಾಣಿಗ ಸಮುದಾಯ ಚಾರಿಟಬಲ್‌ ಟ್ರಸ್ಟ್‌ಗೆ ಮಂಜೂರಾದ ಹಣ ಬಿಡುಗಡೆ ಮಾಡದೇ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಶಿವರಾಜ್ ತಂಗಡಗಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಆರೋಪಿಸಿದ್ದಾರೆ.