ನಮ್ಮ ಮೆಟ್ರೋ ಪಿಂಕ್ ಲೈನ್ನಲ್ಲಿ ಇಂದಿನಿಂದ ಪರೀಕ್ಷಾರ್ಥ ಸಂಚಾರ
ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎತ್ತರಿಸಿದ ಮಾರ್ಗದ ನಿರ್ಮಾಣ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಈ ಮಾರ್ಗದಲ್ಲಿ ಇದೀಗ ಪರೀಕ್ಷಾರ್ಥ ಸಂಚಾರ ಶುರುವಾಗಿದೆ. ಈ ಮಾರ್ಗದಲ್ಲಿ ಒಟ್ಟು 5 ನಿಲ್ದಾಣಗಳು ಇವೆ. ಪರೀಕ್ಷಾರ್ಥ ಸಂಚಾರ ಮುಗಿದ ಬಳಿಕ ಸುರಕ್ಷತಾ ಪ್ರಮಾಣಪತ್ರ ಲಭಿಸಿದ ಕೂಡಲೇ ಈ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗಲಿದೆ