Tuesday, 27th September 2022

ಬಿಲ್ ಕೇಳಿದ ಬೆಸ್ಕಾಂ ಅಧಿಕಾರಿ, ಸಿಬ್ಬಂದಿಗಳಿಗೆ ಶಾಕ್ ನೀಡಿದ ಗ್ರಾಮಸ್ಥರು

ತುಮಕೂರು: ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಗ್ರಾಮಸ್ಥರು ಕಲ್ಲು, ದೊಣ್ಣೆಗಳಿಂದ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ವಿದ್ಯುತ್ ಬಿಲ್ ವಸೂಲಿಗಾಗಿ ಶಾಖಾಧಿಕಾರಿ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗ್ರಾಮಸ್ಥರು ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಲೈನ್ ಮ್ಯಾನ್​ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುಗಳೆಲ್ಲರನ್ನೂ ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ.