ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೀದರ್

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ಸೆಕ್ಯೂರಿಟಿ ಗಾರ್ಡ್‌ನ ಕೊಂದು, 83 ಲಕ್ಷ ದೋಚಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಬಿಹಾರದ ವೈಶಾಲಿ ಜಿಲ್ಲೆಯ ಧಾಮೋದರ್ ಎಂಬ ಗ್ರಾಮದಲ್ಲಿ ಇಬ್ಬರು ಆರೋಪಿಗಳನ್ನು ಬೀದರ್‌ ಪೊಲೀಸರು ಬಂಧನ ಮಾಡಿದ್ದಾರೆ. ಪ್ರಕರಣ ನಡೆದ 1 ವರ್ಷ 7 ತಿಂಗಳ ಬಳಿಕ ದರೋಡೆಕೋರರ ಬಂಧನವಾಗಿದೆ. ಸದ್ಯ ದರೋಡೆಕೋರರನ್ನು ಪೊಲೀಸರು ಬೀದರ್‌ಗೆ ಕರೆತರುತ್ತಿದ್ದಾರೆ‌‌‌‌.

Telangana Accident: ತೆಲಂಗಾಣದಲ್ಲಿ ಭೀಕರ ಅಪಘಾತ; ಆಟೋಗೆ ಪೆಟ್ರೋಲ್‌ ಟ್ಯಾಂಕರ್‌ ಡಿಕ್ಕಿಯಾಗಿ ಬೀದರ್‌ ಮೂಲದ 7 ಕೃಷಿ ಕಾರ್ಮಿಕರ ದುರ್ಮರಣ

ತೆಲಂಗಾಣದಲ್ಲಿ ಭೀಕರ ಅಪಘಾತ; ಬೀದರ್‌ನ 7 ಕೃಷಿ ಕಾರ್ಮಿಕರ ದುರ್ಮರಣ

ಭೀಕರ ಅಪಘಾತಕ್ಕೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

MLA Ajay Singh: ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ಅಜಯ್ ಸಿಂಗ್‌ಗೆ ಸಚಿವ ಸ್ಥಾನ: ಪಟಾಕಿ ಸಿಡಿಸಿ ಸಿಹಿ ಹಂಚಿದ ಕಾರ್ಯಕರ್ತರು

ಅಜಯ್ ಸಿಂಗ್‌ಗೆ ಸಚಿವ ಸ್ಥಾನ: ಪಟಾಕಿ ಸಿಡಿಸಿ ಸಿಹಿ ಹಂಚಿದ ಕಾರ್ಯಕರ್ತರು

ಸಚಿವ ಸ್ಥಾನ ಲಭಿಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರು ಅಂಬೇಡ್ಕರ್ ವೃತ್ತದಲ್ಲಿ ಸೇರಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪರ ಘೋಷಣೆಗಳನ್ನು ಕೂಗಿ, ಪಕ್ಷದ ನಾಯಕತ್ವದ ನಿರ್ಧಾರವನ್ನು ಸ್ವಾಗತಿಸಿದರು.

ಇಚ್ಛಾಶಕ್ತಿ ಕೊರತೆ: ಕಾರಂಜಾ ಸಂತ್ರಸ್ಥರಿಗಿನ್ನೂ ಸಿಕ್ಕಿಲ್ಲ ನ್ಯಾಯ

ಇಚ್ಛಾಶಕ್ತಿ ಕೊರತೆ: ಕಾರಂಜಾ ಸಂತ್ರಸ್ಥರಿಗಿನ್ನೂ ಸಿಕ್ಕಿಲ್ಲ ನ್ಯಾಯ

ಕಾರಂಜಾ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಸದಸ್ಯರ ಸಾಮೂಹಿಕ ಆತ್ಮಹತ್ಯೆಯತ್ನಕ್ಕೂ ಸರಕಾರ ಮಣಿದಿಲ್ಲ. ಇಲ್ಲಿನ ಸಂತ್ರಸ್ತರ ಪಾಲಿಗೆ ಪರಿಹಾರ ಗಗನಕುಸುಮವಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಇದುವರೆಗೂ ಸೂಕ್ತ ಪರಿಹಾರ ಬಂದಿಲ್ಲ. ಈ ವಿಚಾರದಲ್ಲಿ ಕಾಲಕ್ಕೆ ತಕ್ಕಂತೆ ರಾಜಕಾರಣ ಮಾಡಲಾಗುತ್ತಿದೆ ಎಂಬುದು ರೈತರ ಅಳಲು. ಯಾವುದೇ ಷರತ್ತು ಇಲ್ಲದೆ 4 ದಶಕಗಳ ಹಿಂದೆ ಭೂಮಿ ನೀಡಿದ ರೈತರ ಬದುಕು ದುಸ್ತರ ಆಗಿದೆ.

600 ಕೋಟಿ ರೂ.ನ ನೂತನ ಅನುಭವ ಮಂಟಪ ಶೀಘ್ರ ಲೋಕಾರ್ಪಣೆ

600 ಕೋಟಿ ರೂ.ನ ನೂತನ ಅನುಭವ ಮಂಟಪ ಶೀಘ್ರ ಲೋಕಾರ್ಪಣೆ

ಜಿಲ್ಲೆಯ ಬಸವಕಲ್ಯಾಣ ನಗರದ ತ್ರಿಪುರಾಂತ ಕೆರೆಯ ದಡದಲ್ಲಿ 7.5 ಎಕರೆ ವಿಸ್ತಾರ, ಸುಮಾರು 600 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, 6 ಅಂತಸ್ತಿನ ಅನುಭವ ಮಂಟಪದ ಕಾಮಗಾರಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವೀಕ್ಷಿಸಿದರು.ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಅಕ್ರಮ ಸಂಬಂಧದ ಕುರಿತು ಪ್ರಶ್ನಿಸಿದ ಪತ್ನಿಯನ್ನೇ ರಾಡ್‌ನಿಂದ ಹೊಡೆದು ಕೊಂದ ಪತಿ

ಪತ್ನಿಯನ್ನೇ ರಾಡ್‌ನಿಂದ ಹೊಡೆದು ಕೊಂದ ಪತಿ

ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಂದ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿ.

Karnataka Weather: ಇಂದು ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಅಬ್ಬರಿಸಲಿದ್ದಾನೆ ವರುಣ!

ಇಂದು ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮನೆ ಬೀಗ ಮುರಿದು ಮುರಿದು ಕಳ್ಳತನ ; 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿದ ಕಳ್ಳರು

ಮನೆ ಬೀಗ ಮುರಿದು ಮುರಿದು ಕಳ್ಳತನ

ಮನೆಯಲ್ಲಿರುವವರು ಮದುವೆಗೆಂದು ತೆರಳಿದ್ದಾಗ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಬೀದರ್ ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ. ಮನೆ ಮಂದಿ ಮದುಗೆ ತೆರಳಿದ್ದಾಗ ಕಳ್ಳತನ ಮಾಡಲಾಗಿದೆ.

Karnataka Weather: ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

Karnataka Weather Report: ಜೂನ್‌ 21ರಿಂದ 23ವರೆಗೆ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಜಾ ಭಾರತ ರಿಯಾಲಿಟಿ ಶೋ ಕಲಾವಿದ ಸಾವು; ಅರಣ್ಯದಲ್ಲಿ ಪತ್ತೆಯಾಯ್ತು ಶವ

ಮಜಾ ಭಾರತ ರಿಯಾಲಿಟಿ ಶೋ ಕಲಾವಿದ ಸಾವು

ಮಜಾಭಾರತ ಕಾಮಿಡಿ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡಿದ್ದ ಕಲಾವಿದ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿಯಲ್ಲಿ ನಡೆದಿದೆ. ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ ಶವವಾಗಿ ಪತ್ತೆಯಾಗಿದ್ದಾರೆ.

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು; ಕುಟುಂಬಸ್ಥರು ಅಸ್ವಸ್ಥ

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು

ಮಾವಿನ ಹಣ್ಣನ್ನು ತಿಂದ ಬಳಿಕ ಸಹೋದರಿಯರಿಬ್ಬರು ಸಾವನ್ನಪ್ಪಿದ ಘಟನೆ ಬೀದರ್‌ನಲ್ಲಿ ನಡೆದಿದೆ. ಮನೆಯಲ್ಲಿ ಊಟದ ಬಳಿಕ ಮಾವಿನ ಹಣ್ಣು ತಿಂದ ಇಬ್ಬರು ಸಹೋದರಿಯರು ತೀವ್ರ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Bidar News: ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ; ಬೀದರ್‌ನಲ್ಲಿ ಕೃಷಿ ಅಧಿಕಾರಿಗಳಿಂದ 9.35 ಲಕ್ಷ ಮೌಲ್ಯದ 1,539 ಚೀಲ ಜಪ್ತಿ

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ; ಬೀದರ್‌ನಲ್ಲಿ 1,539 ಚೀಲ ಜಪ್ತಿ

ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯಲ್ಲಿ ಯಾರಾದರೂ ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಿದ್ದರೆ, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರೆ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Bidar News: ಹೆಡ್‌ ಮಾಸ್ಟರ್‌ ಕಿರುಕುಳ ಆರೋಪ; ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್‌ನಲ್ಲಿ ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್‌ನ ಪ್ರತಾಪ್ ನಗರದ ಬಳಿ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕಿರುಕುಳ ನೀಡಿದ್ದಾರೆ ಎಂದು 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್‌ನಲ್ಲೊಬ್ಬ ವಿಕೃತ ಕಾಮಿ; ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ಮುನೀರ್ ಅಹ್ಮದ್ ಅರೆಸ್ಟ್‌

ಮೃತ ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ವಿಕೃತ ಕಾಮಿ ಅರೆಸ್ಟ್

Crime News: ಬೀದರ್‌ನ ಬ್ರಿಮ್ಸ್ ಬೋಧನಾ ಆಸ್ಪತ್ರೆಯ ಶವಾಗಾರದೊಳಗೆ ಮೃತ ಮಹಿಳೆಯರ ಫೋಟೊವನ್ನು ತನ್ನ ಫೋನ್‌ನಲ್ಲಿ ರಹಸ್ಯವಾಗಿ ತೆಗೆಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುನೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯಲ್ಲಿ ಅಟೆಂಡರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ.

Karnataka Weather: ಆರೆಂಜ್‌ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್ ಪಶು ವೈದ್ಯಕೀಯ ವಿವಿಯ 45 ಕೋಟಿ ರೂ. ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

ಬೀದರ್ ಪಶು ವಿವಿ ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

Bidar Veterinary University scandal: 2017-18ರ ಅವಧಿಯಲ್ಲಿ ಬೀದರ್‌ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಾಮಗ್ರಿ ಖರೀದಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣ ದರ್ಬಳಕೆ ಮಾಡಲಾಗಿತ್ತು. ಬಳಿಕ 2021ರಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಆರು ಮಂದಿ ಆರೋಪಿಗಳ ಬಂಧನವಾಗಿದೆ.

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮುಂಜಾಗ್ರತಾ ಸಭೆಯಲ್ಲಿ ಸಾಕಷ್ಟು ಬಾರಿ ಸೂಚಿಸಿದರು ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜವಾಡಿ ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಮಾರುತಿ ರಾಠೋಡ್ ಅವರು ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆ ಅನಾಹುತ; ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Heavy Rain: ರಾಜ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ (Bidar) ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್‌ನ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ.

Bike Accident: ಔರಾದ್‌ನಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು!

ಔರಾದ್‌ನಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Bidar News: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್‌-ಔರಾದ್‌ ರಾಷ್ಟ್ರೀಯ ಹೆದ್ದಾರಿ-161 (ಎ) ರಲ್ಲಿ ಔರಾದ್‌ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.

ಬಸವಕಲ್ಯಾಣದಲ್ಲಿ ಬಸವೇಶ್ವರರ ರಥೋತ್ಸವದ ವೇಳೆ ಘೋರ ದುರಂತ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಬಸವಕಲ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

Bidar News: ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಬಸವೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ವೇಳೆ ಭೀಕರ ಅವಘಡ ಸಂಭವಿಸಿದೆ. ರಥ ಎಳೆಯುವ ವೇಳೆ ಆಯಾ ತಪ್ಪಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ಧನರಾಜ ಚಾಕೂರೆ (65) ಮೃತಪಟ್ಟಿದ್ದಾರೆ.

Bidar news: ಬೀದರ್‌ನಲ್ಲಿ ಬಿಸಿಲಿನ ಝಳಕ್ಕೆ ಯುವಕ ಬಲಿ

ಬೀದರ್‌ನಲ್ಲಿ ಬಿಸಿಲಿನ ಝಳಕ್ಕೆ ಯುವಕ ಬಲಿ

ಬಿಸಿಲಿನಿಂದಲೇ ಮಗ ಸಾವನ್ನಪ್ಪಿದ್ದಾನೆ ಎಂದು ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಿಸಿಲು ಅತ್ಯಧಿಕವಾಗಿರುವ ಹೊತ್ತಿನಲ್ಲಿ ಹೊರಗೆ ಹೋಗದಂತೆ, ಹೋಗಲೇಬೇಕಾದ ಪರಿಸ್ಥಿತಿಯಲ್ಲಿ ತಲೆ ಹಾಗೂ ಮುಖವನ್ನು ಬಟ್ಟೆಯಿಂದ ಕವರ್‌ ಮಾಡಿಕೊಳ್ಳುವಂತೆ, ಹಾಗೂ ಸಾಕಷ್ಟು ನೀರು ಸೇವಿಸಿ ಹೈಡ್ರೇಟ್‌ ಆಗಿರುವಂತೆ ತಜ್ಞರು ಸೂಚಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

40th State Journalists' Conference: ವಿಶ್ವವಾಣಿಯ ರಮೇಶ್ ಕುಮಾರ್ ನಾಯಕ್‌ಗೆ ʼಗರುಡನಗಿರಿ ನಾಗರಾಜ್ ಪ್ರಶಸ್ತಿʼ ಪ್ರದಾನ

ರಮೇಶ್ ಕುಮಾರ್ ನಾಯಕ್‌ಗೆ ʼಗರುಡನಗಿರಿ ನಾಗರಾಜ್ ಪ್ರಶಸ್ತಿʼ ಪ್ರದಾನ

KUWJ Awards: ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶ್ವವಾಣಿ ಡಿಜಿಟಲ್ ಸಂಪಾದಕ ರಮೇಶ್ ಕುಮಾರ್ ನಾಯಕ್ ಸೇರಿ ವಿವಿಧ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Loading...