Tuesday, 7th December 2021

ಎಂಜಿನಿಯರಿಂಗ್ ಕಲಿಯುವ ವಿದ್ಯಾರ್ಥಿಗಳಿಗೆ ಜೀವಶಾಸ್ತ್ರ ಕಲಿಕೆ ಕಡ್ಡಾಯ: ವಿಟಿಯು

ಬೆಂಗಳೂರು: ವಿಶ್ವೇಶ್ವರಯ್ಯ ಟೆಕ್ನಾಲಾಜಿಕಲ್ ಯೂನಿವರ್ಸಿಟಿಗೆ (ವಿಟಿಯು) ಸಂಯೋಜಿತವಾಗಿರುವ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜೀವಶಾಸ್ತ್ರವನ್ನು ಕಲಿಯಬೇಕಾಗಿದೆ.

ಈ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಈ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳಿಗೆ ಜೀವಶಾಸ್ತ್ರವನ್ನು ಬೋಧನೆ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

ಎಂಜಿನಿಯರಿಂಗ್ ಪದವೀಧರರಿಗೆ ಜೀವಶಾಸ್ತ್ರದ ಜ್ಞಾನದ ಪ್ರಾಮುಖ್ಯತೆಯನ್ನು ಪರಿಗಣಿಸಿ, ವಿಟಿಯು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಶಿಕ್ಷಣದ ನಾಲ್ಕನೇ ಸೆಮಿಸ್ಟರ್‌ನಲ್ಲಿ ‘ಎಂಜಿನಿಯರ್‌ಗಳಿಗೆ ಜೀವಶಾಸ್ತ್ರ’ ವಿಷಯ ಪರಿಚಯಿಸಲು ನಿರ್ಧರಿಸಿದೆ.