Thursday, 23rd March 2023

ಬಿಟ್ ಕಾಯಿನ್ ಪ್ರಕರಣ ವಿಚಾರ ಹೊಸದಲ್ಲ: ಸಂಸದ ಬಿ.ವೈ.ರಾಘವೇಂದ್ರ

ದಾವಣಗೆರೆ: ಬಿಟ್ ಕಾಯಿನ್ ಪ್ರಕರಣದ ವಿಚಾರ ಹೊಸದಲ್ಲ, ಮೂರ್ನಾಲ್ಕು ವರ್ಷ ಗಳ ಹಿಂದಿನ ಘಟನೆಯಾಗಿದೆ. ವಿಚಾರಣೆ ನಂತರ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಘಟನೆ ಯಲ್ಲ. ಮೂರ್ನಾಲ್ಕು ವರ್ಷಗಳ ಹಿಂದೆಯೇ ನಡೆದಿರುವ ಘಟನೆಯಾಗಿದ್ದು, ಈಗ ಹೆಚ್ಚು ಬೆಳಕಿಗೆ ಬಂದಿದೆ ಎಂದರು.

ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಈ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸು ತ್ತಿವೆ. ಚುನಾವಣೆಗೆ ಒಂದು ವಿಚಾರ ಬೇಕಾಗಿದೆ. ಆ ಕಾರಣಕ್ಕಾಗಿ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.

ವಿಚಾರಣೆ ನಡೆದರೆ ಯಾರು ತಪ್ಪು ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಸತ್ಯ ಏನು ಎಂಬುದು ಬಹಿರಂಗವಾಗಲಿದೆ ಎಂದು ತಿಳಿಸಿದರು.

error: Content is protected !!