Monday, 16th May 2022

ಬಿಜೆಪಿ ಕೋರ್ ಕಮಿಟಿ ಸಭೆ ದಿಢೀರ್ ರದ್ದು

ಬೆಂಗಳೂರು: ಬುಧವಾರ ಮಧ್ಯಾಹ್ನ ನಡೆಯಬೇಕಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ಯನ್ನು ದಿಢೀರ್ ರದ್ದು ಪಡಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಮಂಗಳವಾರದಿಂದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಇಂದು ಕೂಡ ಮುಂದುವರೆದು, ಮಧ್ಯಾಹ್ನ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆ ಯಲು ನಿಗಧಿ ಪಡಿಸಲಾಗಿತ್ತು.

ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ಹುಬ್ಬಳ್ಳಿಯ ಡೆನ್ನಿಸನ್ ಹೊಟೇಲ್ ನಲ್ಲಿ ನಡೆಯುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಯಬೇಕಿತ್ತು. ಆದರೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಭೆಯ ಬಳಿಕ ಪ್ರವಾಸಕ್ಕೆ ತೆರಳಬೇಕಿರೋ ಕಾರಣ, ಇಂದಿನ ಬಿಜೆಪಿ ಕೋರ್ ಕಮಿಟಿ ಸಭೆ ರದ್ದುಗೊಂಡಿದೆ.

ಇಂದಿನ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮುಂದೆ ರಾಜ್ಯ ಬಿಜೆಪಿ ಮುಖಂಡರು ಚರ್ಚಿಸಲಿದ್ದರು ಎನ್ನಲಾಗಿತ್ತು. ಅದರಲ್ಲೂ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಸಿಎಂ ಬದಲಾವಣೆಯ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿತ್ತು.