Thursday, 2nd February 2023

ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ: ಸಿಎಂ ಬೊಮ್ಮಾಯಿ ಸುಳಿವು

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಮಲ ಅರಳುವುದು ಖಾತ್ರಿ ಯಾಗಿದೆ.

ಬೆನ್ನಲ್ಲೇ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ. ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ನಾವು ಒಟ್ಟಾಗಿ ಹೋಗೋಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೇಳಿದ್ದೇನೆ. ಒಂದಾಗಿ ಕೆಲಸ ಮಾಡಲು ಕುಮಾರಸ್ವಾಮಿ ಒಲವು ತೋರಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಯಾದರೆ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಬಹುಮತ ಸಿಗುತ್ತದೆ ಈ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ. ಒಟ್ಟಾರೆ ಕಲಬುರ್ಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಫಿಕ್ಸ್ ಆಗಿದೆ.

ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಮೈತ್ರಿ ವಿಚಾರವಾಗಿ ಮಾತನಾಡಿದ್ದೇನೆ. ಪಾಲಿಕೆಯಲ್ಲಿ ಒಟ್ಟಾಗಿ ಕೆಲಸ ಮಾಡಲು ಅವರೂ ಒಲವು ಹೊಂದಿದ್ದಾರೆ. ಜೊತೆಗೆ ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ, ಜೆಡಿಎಸ್ ಸೇರಿ ಮೈತ್ರಿ ಖಚಿತ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

error: Content is protected !!