Friday, 9th December 2022

ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಜೆ.ಪಿ.ನಡ್ಡಾರಿಗೆ ಆಹ್ವಾನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಕರ್ನಾಟಕದಲ್ಲಿ ಏಪ್ರಿಲ್ 16 ಮತ್ತು 17 ರಂದು ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ರಾಷ್ಟ್ರೀಯ ಅಧ್ಯಕ್ಷರನ್ನು ನಳಿನ್‍ ಕುಮಾರ್ ಕಟೀಲ್ ಆಹ್ವಾನಿಸಿದರು. ಇದೇ ವೇಳೆ, ಅವರು ರಾಜ್ಯದಲ್ಲಿ ಪಕ್ಷ ಸಂಘಟನೆಯ ಮುಂದಿನ ಕಾರ್ಯರೂಪಗಳ ಬಗ್ಗೆ ಚರ್ಚೆ ನಡೆಸಿದರು.