Monday, 26th October 2020

ಎರಡೂ ಉಪಚುನಾವಣೆಗಳಲ್ಲಿ ಕಮಲವೇ ಅರಳಲಿದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ : ಶಿರಾ ಹಾಗೂ ರಾಜರಾಜೇಶ್ವ ನಗರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸ ಲಿದ್ದಾರೆ. ಉಪಚುನಾವಣೆಯ ಎರಡು ಕಡೆ ಗೆಲುವು ನಮ್ಮದೇ ಎಂಬುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶಕ್ತಿ ಮೀರಿ ನೆರೆ ಸಂತ್ರಸ್ತರಿಗೆ ಸಹಾಯ ಮಾಡುತ್ತೇವೆ. ಮನೆ ಕಳೆದುಕೊಂಡವರಿಗೆ ಹೊಸ ಮನೆ ಕಟ್ಟಿಸಿಕೊಡಲಾಗುತ್ತದೆ. ಬೆಳೆ ಪರಿಹಾರಕ್ಕೂ ಕ್ರಮ ಕೈಗೊಳ್ಳ ಲಾಗುತ್ತದೆ ಎಂಬುದಾಗಿ ತಿಳಿಸಿದರು.

ಉಪ ಚುನಾವಣೆಯಲ್ಲಿ ಬಿಜೆಪಿಯ ತಂತ್ರಗಾರಿಕೆ ಕುರಿತಂತೆ, ಉಪ ಚುನಾವಣೆಯಲ್ಲಿ ನೂರಕ್ಕೆ ನೂರು ಎರಡು ಕ್ಷೇತ್ರಗಳಲ್ಲಿ ತಾವೇ ಗೆಲುವನ್ನು ಸಾಧಿಸಲಾಗುತ್ತದೆ. ಪರಿಶ್ರಮ ಮುಂದುವರೆಸಲಾಗಿದೆ. ಶಿರಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಿಂದ ವಿಜಯೇಂದ್ರ ಅವರೇ ಬೀಡು ಬಿಟ್ಟು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

Leave a Reply

Your email address will not be published. Required fields are marked *