ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಅಬ್ಬರ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಹೆಚ್ಚಿದೆ. ಸದ್ಯ 3,228 ಜನರಿಗೆ ಸೋಂಕು ದೃಢಪಟ್ಟಿದೆ.
ಕರೋನಾ ಸೋಂಕಿತರು ಹಾಗೂ ಡಯಾಬಿಟಿಸ್ ರೋಗಿಗಳನ್ನು ಕಾಡುವ ಬ್ಲ್ಯಾಕ್ ಫಂಗಸ್ ಸೋಂಕು ರಾಜ್ಯದಲ್ಲಿ ಹೆಚ್ಚಳವಾಗುತ್ತಿದ್ದು, ಆತಂಕಕ್ಕೆ ಕಾರಣ ವಾಗಿದೆ. ಸೋಂಕಿತ 2,967 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿಗೆ 261 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 1,039 ಮಂದಿಗೆ ಸೋಂಕು ದೃಢಪಟ್ಟಿದ್ದು, 81 ಜನರು ಮೃತಪಟ್ಟಿದ್ದಾರೆ.