Thursday, 5th August 2021

ಹಾಸನ: ಗೋದಾಮಿನಲ್ಲಿ ಸ್ಪೋಟ, ಒಬ್ಬನ ಸಾವು

ಹಾಸನ: ಸ್ಫೋಟಕ ತುಂಬಿದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಒಬ್ಬ ಮೃತಪಟ್ಟಿದ್ದಾನೆ. ತಾಲ್ಲೂಕಿನ ಚಾಕೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ.

ಚಾಕೇನಹಳ್ಳಿಯಲ್ಲಿ ಸ್ಪೋಟಕಗಳನ್ನು ತುಂಬಿದ್ದ ಗೋದಾಮಿನಲ್ಲಿ ಸಂಪತ್(27) ಎಂಬವರು ಮೃತಪಟ್ಟಿದ್ದು, ಇಬ್ಬರು ಗಾಯ ಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರನ್ನು ಹಾಸನ ಆಸ್ಪತ್ರೆಗೆ ಮತ್ತೊಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲು ಗಣಿಗಾರಿಕೆಗೆ ಸ್ಪೋಟಕಗಳನ್ನು ಸಂಗ್ರಹಿಸಲಾಗಿದ್ದು ವಿತರಣೆಯ ವೇಳೆಯಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಚಾಕೇನಹಳ್ಳಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ, ಚಿಕ್ಕಬಳ್ಳಾಪುರದ ಕಲ್ಲುಗಣಿಗಾರಿಕೆ ಸ್ಥಳಗಳಲ್ಲಿ ಭಾರೀ ಪ್ರಮಾಣದ ಜಿಲೆಟಿನ್ ಸ್ಪೋಟಗೊಂಡು ಹಲವರು ಪ್ರಾಣ ಕಳೆದುಕೊಂಡಿದ್ದರು.

Leave a Reply

Your email address will not be published. Required fields are marked *