Friday, 7th May 2021

ಜಿಲೆಟಿನ್ ಸ್ಪೋಟ ಪ್ರಕರಣ: ಮೂವರು ವಶಕ್ಕೆ

ಶಿವಮೊಗ್ಗ : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಮೀನು ಮಾಲೀಕ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಪೋಟ ಸಂಭವಿಸಿದ ಕಲ್ಲು ಗಣಿಗಾರಿಕೆ ಜಮೀನು ಮಾಲೀಕ ಅವಿನಾಶ್ ಕುಲಕರ್ಣಿ, ಗುತ್ತಿಗೆದಾರ ಸುಧಾಕರ್ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆ, ಅಕ್ರಮ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ಜೆಡಿಎಸ್ ಮುಖಂಡ ನರಸಿಂಹ ಎಂಬುವರನ್ನು ಸದ್ಯ ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಗುರುವಾರ ರಾತ್ರಿ ಹುಣಸೋಡ ಕಲ್ಲು ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟಗೊಂಡ ಪರಿಣಾಮ 8 ಕಾರ್ಮಿಕರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *