ಬೆಂಗಳೂರು: ಬೆಂಗಳೂರಿನ ಆಹಾರ ಉತ್ಪಾದನೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು, ಇಬ್ಬರು ಸಜೀವ ದಹನಗೊಂಡರು. ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿ ಇರುವ ಎಂ ಎಂ ಫುಡ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಬಿಹಾರ ಮೂಲದ ಮನೀಷ್ ಮತ್ತು ಸೌರಭ್ ಸಜೀವ ದಹನವಾಗಿದ್ದಾರೆ. ಸ್ಫೋಟದ ಸಂದರ್ಭ ಕಾರ್ಖಾನೆಯಲ್ಲಿ ಐದು ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದು, ಮೂವರು ಗಾಯ ಗೊಂಡಿದ್ದಾರೆ. ಸ್ಫೋಟದಿಂದ ಅಕ್ಕಪಕ್ಕದ ಮನೆಯವರಿಗೂ ಗಾಯಗೊಂಡಿದ್ದಾರೆ ಎಂದು ವರದಿ ಯಾಗಿದೆ.
ಫ್ಯಾಕ್ಟರಿ ಅಕ್ಕಪಕ್ಕದ ಮನೆಯ ಇಬ್ಬರಿಗೂ ಸುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ವಿಕ್ಚೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಗಡಿ ರಸ್ತೆ ಎಂ ಎಂ ಫುಡ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಐದು ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಬಿಹಾರ ಮೂಲದ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.