ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ರಾಜ್ಯದ ವಿವಿಧ ಕಡೆ ನಡೆದ ಪ್ರತಿಭಟನೆ ಹಾಗೂ ಕಲ್ಲು ತೂರಾಟ ಮತ್ತಿತರ ಘಟನೆಗಳು ನಡೆದಿದ್ದು ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆೆಸ್ ಕಾರ್ಯಕರ್ತರು ರಾಜ್ಯದ ವಿವಿಧ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿಿರುವ ಬೆನ್ನಲ್ಲೇ, ಗೃಹ ಕಚೇರಿ ಕೃಷ್ಣಾಾಗೆ ಭೇಟಿ ನೀಡಿದ ಗೃಹಸಚಿವ ಬಸವರಾಜ ಬೊಮ್ಮಾಾಯಿ, ಮುಖ್ಯಮಂತ್ರಿಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸುಧೀರ್ಘ ಚರ್ಚೆ ನಡೆಸಿದರು. ಬಳಿಕ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಕುಮಾರ್ ಬಂಧನದ ಬಳಿಕ ಮಂಗಳವಾರ ರಾತ್ರಿಿಯಿಂದ ಕೆಲವೆಡೆ ಪ್ರತಿಭಟನೆ ಹಾಗೂ ಬಸ್ಗಳಿಗೆ ಕಲ್ಲು ತೂರಾಟದಂತಹ ಪ್ರಕರಣಗಳು ನಡೆದಿದೆ. ಬಿಗಿ ಬಂದೋಬ್ತ್ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಪರಿಸ್ಥಿಿತಿ ಹತೋಟಿಯಲ್ಲಿದೆ. ಮಂಡ್ಯ, ಚಿಕ್ಕಬಳ್ಳಾಾಪುರ, ಬೆಂಗಳೂರು, ಹಾಸನ, ಮೈಸೂರು ಸೇರಿದಂತೆ ಕೆಲವೆಡೆ ಬಸ್ಗಳಿಗೆ ಕಲ್ಲು ತೂರಾಟ, ಟೈರ್ಗೆ ಬೆಂಕಿ ಹಚ್ಚಿಿರುವ ಘಟನೆಗಳು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿರುವ ಮಾಹಿತಿಗಳು ಲಭ್ಯವಾಗಿದ್ದು, ಈ ಸಂಬಂಧ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದು ತಿಳಿಸಿದರು.
ಪ್ರತಿಭಟನಾ ನಿರತರನ್ನು ಬಂಧಿಸುವಂತೆ ಈ ಕ್ಷಣದವರೆಗೂ ಸರಕಾರವಾಗಲೀ ಅಥವಾ ತಾವಾಗಲೀ ಆದೇಶ ನೀಡಿಲ್ಲ.ಆದರೆ ಸಮಯ ಸಂದರ್ಭ ಹಾಗೂ ಪರಿಸ್ಥಿಿತಿಯನ್ನು ಗಮನಿಸಿ ಮುನ್ನೆೆಚ್ಚರಿಕೆ ಕ್ರಮವಾಗಿ ವಶಕ್ಕೆೆ ಪಡೆಯಲು ಸಂಬಂಧ ಪಟ್ಟ ಅಧಿಕಾರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಇ.ಡಿ ಮತ್ತು ಆದಾಯ ತೆರಿಗೆ ಇಲಾಖೆಗಳು ಸ್ವಾಾಯತ್ತ ಸಂಸ್ಥೆೆಗಳಾಗಿದ್ದು, ಅವುಗಳ ಮೇಲೆ ಯಾರೂ ಪ್ರಭಾವ ಬೀರಿಲ್ಲ. ಇದರಲ್ಲಿ ರಾಜಕೀಯ ದ್ವೇಷದ ಪ್ರಶ್ನೆೆಯೇ ಉದ್ಭವಿಸುವುದಿಲ್ಲ. ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದೇ ಇ.ಡಿ, ಸಿಬಿಐ ಸಂಸ್ಥೆೆಗಳನ್ನು ಬಳಸಿಕೊಂಡು ಹಲವಾರು ರಾಜಕೀಯ ನಾಯಕರನ್ನು ವಿಚಾರಣೆ ನಡೆಸಿಲ್ಲವೇ? ಕಾನೂನು ಕೈಗೆತ್ತಿಿಕೊಂಡು ಹಿಂಸಾಚಾರ ನಡೆಸಿದರೆ ಪೊಲೀಸರು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ.
ಜಗದೀಶ್ ಶೆಟ್ಟರ್ ಕೈಗಾರಿಕಾ ಸಚಿವ