Tuesday, 27th July 2021

ಸಂಚಾರಿ ವಿಜಯ್’ಗೆ ಬ್ರೇನ್ ಸ್ಟ್ರೋಕ್ ?

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಆರೋಗ್ಯ ಬಿಗಡಾಯಿಸುತ್ತಿದ್ದು, ಬ್ರೇನ್ ಸ್ಟ್ರೋಕ್ ಆಗಿದೆ ಎನ್ನಲಾಗಿದೆ.

ನಟ ಸಂಚಾರಿ ವಿಜಯ್ ರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವವಾಗಿರುವುದರಿಂದ ಈಗಾಗಲೇ ಶಸ್ರಚಿಕಿತ್ಸೆ ಮಾಡಲಾಗಿದ್ದು, ಕೋಮಾ ಸ್ಥಿತಿಗೆ ಜಾರಿದ್ದಾರೆ. ಸೋಮವಾರ ವಿಜಯ್ ಗೆ ಬ್ರೇನ್ ಸ್ಟ್ರೋಕ್ ಆಗಿದ್ದು, ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ವಿಜಯ್ ಅವರ ಸ್ನೇಹಿತ ನವೀನ್ ಸ್ಥಿತಿ ಕೂಡ ಗಂಭೀರವಾಗಿದ್ದು, ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಟ ಸಂಚಾರಿ ವಿಜಯ್ ತಮ್ಮ ಸ್ನೇಹಿತ ನವೀನ್ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಬೈಕ್ ಸ್ಕಿಡ್ ಆಗಿ ಕರೆಂಟ್ ಕಂಬಕ್ಕೆ ಗುದ್ದಿದ್ದರು.

Leave a Reply

Your email address will not be published. Required fields are marked *