Friday, 7th May 2021

6ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಎಂಗೆ ಪತ್ರ

ಬೆಂಗಳೂರು : ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಭರವಸೆಗಳ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ನಿಗದಿ ಮಾಡುವುದು ಮತ್ತು ಇತರೆ ಮುಖ್ಯ 8 ಬೇಡಿಕೆ ಗಳನ್ನು ಈಡೇರಿಸುವ ಲಿಖಿತ ಭರವಸೆ ಈಡೇರಿಕೆಗೆ ಮೂರು ತಿಂಗಳು ಕಾಲಾವಕಾಶ ತೆಗೆದುಕೊಂಡ ನಂತರ ಮುಷ್ಕರ ಅಂತ್ಯಗೊಂಡಿತ್ತು. ಬಹು ಮುಖ್ಯ ಬೇಡಿಕೆಯಾದ 6ನೇ ವೇತನ ಆಯೋಗದ ಶಿಫಾರಸ್ಸನ್ನು ಸಾರಿಗೆ ನೌಕರರಿಗೆ ನೀಡುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಯಥಾಸ್ಥಿತಿ ವೇತನ ನೀಡುವುದು ಹಾಗೂ ನೌಕರರಿಗೆ ಅನುಕೂಲ ವಲ್ಲದ 8 ಭರವಸೆಗಳನ್ನು ನೌಕರರಿಗೆ ಅನುಕೂಲವಾಗುವ ರೀತಿಯಲ್ಲಿ ಸರಿಪಡಿಸಿ, ಕೂಡಲೇ ಸಮಸ್ತ ಸಾರಿಗೆ ನೌಕರರು, ಅವರ ಕುಟುಂಬರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಪತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *