Monday, 26th October 2020

ಆರ್‌.ಆರ್‌.ನಗರ, ಶಿರಾ ಉಪಚುನಾವಣೆಗೆ ದಿನಾಂಕ ನಿಗದಿ: ಅ.16ರಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ನಗರದ ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 3ರಂದು ಚುನಾವಣೆ ನಡೆದರೆ, ಅದೇ ತಿಂಗಳ 10ರಂದು ಮತ ಎಣಿಕೆ ನಡೆಯಲಿದೆ.

ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನಾಂಕ. ನಾಮಪತ್ರ ವಾಪಾಸ್ ಪಡೆಯಲು ಅಕ್ಟೋಬರ್ 19ರಂದು ಕೊನೆಯ ದಿನಾಂಕವಾಗಿದೆ. ನವೆಂಬರ್ 3ರಂದು ಚುನಾವಣೆ ನಡೆದರೆ, ಅದೇ ತಿಂಗಳ 10ರಂದು ಮತ ಎಣಿಕೆ ನಡೆಯಲಿದೆ.

ಬಿಹಾರ ವಿಧಾನಸಭೆ ಚುನಾವಣೆಯೊಂದಿಗೆ ಈ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ.

ರಾಜರಾಜೇಶ್ವರಿ ನಗರ ಶಾಸಕರಾಗಿದ್ದ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಸ್ಥಾನ ತೆರವಾಗಿತ್ತು. ಇಲ್ಲಿ ಬಿಜೆಪಿ ಯಿಂದ ಮುನಿರತ್ನ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರು ಇತ್ತೀಚೆಗೆ ನಿಧನ ಹೊಂದಿದ್ದರು.

Leave a Reply

Your email address will not be published. Required fields are marked *