ಲಕ್ಷ್ಮಣ- ಲಕ್ಷ್ಮೀ: ಇಬ್ಬರಲ್ಲಿ ಯಾರು ಲಕ್ಕಿ?
ಲಕ್ಷ್ಮೀ ಹೆಬ್ಬಾಳಕರ ಹಾಗೂ ಲಕ್ಷ್ಮಣ ಸವದಿ ಹೊರತಾಗಿ ಈ ಬಾರಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ರಾಮದುರ್ಗ ಶಾಸಕ ಹಾಗೂ ಸಿದ್ದರಾಮಯ್ಯನವರ ಪರಮಾಪ್ತ ಅಶೋಕ್ ಪಟ್ಟಣ, ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ ಇದ್ದಾರೆ. ತಮ್ಮ ಆಪ್ತ ನಾಯಕರ ಮೂಲಕ ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಅವಕಾಶ ನೀಡುತ್ತದೆ ಎಂಬುದನ್ನು ಕಾದು ನೋಡಬೇಕು.
-
ವಿನಾಯಕ ಮಠಪತಿ
ಮಂತ್ರಿಗಿರಿಗೆ ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಲಕ್ಷ್ಮೀ ಹೆಬ್ಬಾಳಕರ ಬೇಡಿಕೆ, ಅಶೋಕ ಪಟ್ಟಣ, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿಯೂ ರೇಸ್‌ನಲ್ಲಿ
ಬೆಳಗಾವಿ: ಸಿದ್ದರಾಮಯ್ಯ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮತ್ತೊಮ್ಮೆ ಮಂತ್ರಿ ಸ್ಥಾನ ನೀಡಬೇಕು ಎಂಬ ಆಗ್ರಹ ಒಂದೆಡೆಯಾದರೆ, ಮತ್ತೊಂದೆಡೆ ಕಳೆದ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಐದಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದ ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಮಂತ್ರಿಸ್ಥಾನ ನೀಡಬೇಕು ಎಂಬ ಒತ್ತಡ ಇದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆಗೆದುಕೊಳ್ಳುವ ನಿರ್ಧಾರ ಕುತೂಹಲ ಮೂಡಿಸಿದೆ.
ಈಗಾಗಲೇ ಮೊದಲ ಹಂತದಲ್ಲಿ ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಮಂತ್ರಿ ಸ್ಥಾನ ಪಡೆದಿ ದ್ದಾರೆ. ಎರಡನೇ ಹಂತದಲ್ಲಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನ ಕೊಡಬೇಕೆಂಬ ಆಗ್ರಹವೂ ಇದೆ. ಈ ಮಧ್ಯೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಲಕ್ಷ್ಮಣ ಸವದಿ ಇಬ್ಬರೂ ಪ್ರಬಲ ವೀರಶೈವ ಲಿಂಗಾಯತ ಸಮುದಾಯದ ನಾಯಕರಾಗಿದ್ದು, ಒಂದೇ ಜಿಲ್ಲೆಯಲ್ಲಿ ಒಂದು ಸಮುದಾಯಕ್ಕೆ ಎರಡು ಮಂತ್ರಿ ಸ್ಥಾನ ಕೊಡಲು ಸಾಧ್ಯವಾ ಎಂಬ ಪ್ರಶ್ನೆಯೂ ಇದೆ.
ಲಕ್ಷ್ಮೀ ಹೆಬ್ಬಾಳಕರ ಹಾಗೂ ಲಕ್ಷ್ಮಣ ಸವದಿ ಹೊರತಾಗಿ ಈ ಬಾರಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ರಾಮದುರ್ಗ ಶಾಸಕ ಹಾಗೂ ಸಿದ್ದರಾಮಯ್ಯನವರ ಪರಮಾಪ್ತ ಅಶೋಕ್ ಪಟ್ಟಣ, ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ ಇದ್ದಾರೆ. ತಮ್ಮ ಆಪ್ತ ನಾಯಕರ ಮೂಲಕ ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಅವಕಾಶ ನೀಡುತ್ತದೆ ಎಂಬುದನ್ನು ಕಾದು ನೋಡಬೇಕು.
ಇದನ್ನೂ ಓದಿ: Vinayaka Mathapathy Column: ಜಿರಳೆ ಸಹವಾಸ ಕೈ ಬಿಟ್ಟು ಸೈದ್ಧಾಂತಿಕ ದೋಣಿ ಏರಲಿ
ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಹೆಬ್ಬಾಳಕರ
ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಮಹಿಳೆಯರಿಗೆ ತಲುಪಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ ಲಕ್ಷ್ಮೀ ಹೆಬ್ಬಾಳಕರ ಅವರು ಡಿ.ಕೆ.ಶಿವಕುಮಾರ್ ಸಂಪುಟ ದಲ್ಲಿ ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲದೆ, ಸಂಘಟನಾತ್ಮಕ ವಾಗಿ ಅತ್ಯಂತ ಗಟ್ಟಿಯಾಗಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ.
ಬೆಳಗಾವಿ ಮೇಲೆ ಸತೀಶ್ ಹಿಡಿತ
ಬೆಳಗಾವಿ ಜಿಲ್ಲಾ ರಾಜಕಾರಣದ ಮೇಲೆ ಹಿಡಿತ ಸಾಧಿಸುವುದು ಇಲ್ಲಿನ ನಾಯಕರ ಮೊದಲ ಆಯ್ಕೆ. ಅದರಂತೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸತೀಶ್ ಜಾರಕಿಹೊಳಿ ಕೊನೆಗೂ ಬೆಳಗಾವಿ ರಾಜಕಾರಣ ಮೇಲಿನ ಹಿಡಿತ ಬಿಟ್ಟುಕೊಡಲು ಒಪ್ಪಿಲ್ಲ. ಲೋಕೋಪಯೋಗಿ ಇಲಾಖೆ ಜತೆಗೆ ಬೆಳಗಾವಿ ಉಸ್ತುವಾರಿ ಉಳಿಸಿಕೊಳ್ಳುವ ಮೂಲಕಚಾಣಾಕ್ಷ ತಂತ್ರ ಮುಂದುವರಿಸಿದ್ದರೆ. ದಿ.ಉಮೇಶ್ ಕತ್ತಿ ನಂತರ ಭಾಗಶಃ ಜಾರಕಿಹೊಳಿ ಸಹೋದರರ ಹಿಡಿತದಲ್ಲಿ ಬೆಳಗಾವಿ ಉಸ್ತುವಾರಿ ಇದೆ. ಒಟ್ಟಿನಲ್ಲಿ ಜಿಲ್ಲಾ ರಾಜಕಾರಣದ ಮೇಲೆ ಹಿಡಿತ ಮುಂದುವರಿಸಿಕೊಳ್ಳುವಲ್ಲಿ ಸತೀಶ್ ಜಾರಕಿ ಹೊಳಿ ಯಶಸ್ವಿಯಾಗಿದ್ದಾರೆ.
ಸವದಿಗೆ ಕೊಟ್ಟ ಭರವಸೆ ಈಡೇರಿಸುತ್ತಾ ಕಾಂಗ್ರೆಸ್?
ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿಗೆ ಸಿದ್ದರಾಮಯ್ಯ ಸರಕಾರದಲ್ಲಿ ಮಂತ್ರಿ ಸ್ಥಾನ ನೀಡಿರಲಿಲ್ಲ. ಈ ವೇಳೆ ಬರುವ ದಿನಗಳಲ್ಲಿ ತಮಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪಕ್ಷದ ಪ್ರಮುಖ ನಾಯಕರು ಸವದಿಗೆ ನೀಡಿದ್ದರು. ಅಷ್ಟೇ ಅಲ್ಲದೆ ಮುಂಬರುವ ಚುನಾವಣೆಯಲ್ಲಿಗಡಿ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನಾ ತ್ಮಕವಾಗಿ ಗಟ್ಟಿಗೊಳಿಸುವ ಅನಿವಾರ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಕೊಟ್ಟ ಮಾತಿನಂತೆ ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎನ್ನುತ್ತಾರೆಲಕ್ಷ್ಮಣ ಸವದಿ.