ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೈಸೂರು ಜಿಲ್ಲೆ ಜಾನುವಾರುಗಳಿಗೆ ಮೇವು, ನೀರಿಗೆ ಬರ ಇಲ್ಲ

ಪ್ರಸ್ತುತ ಜಿಲ್ಲೆಯಲ್ಲಿ 34 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ ಎಂದು ಪಶುಪಾ ಲನಾ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ಮುಂಗಾರು ಮಳೆ ಸಕಾಲದಲ್ಲಿ ಬಾರದೆ ಪರಿಸ್ಥಿತಿ ಕೈ ಮೇರಿ ಹೋದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

ಕೆ.ಜೆ.ಲೋಕೇಶ್ ಬಾಬು, ಮೈಸೂರು

ಮೇವು, ನೀರಿನ ಬರ ನೀಗಿಸಿದ ಜಿಲ್ಲಾಡಳಿತ ತೆಗೆದುಕೊಂಡ ಸಕಾಲಿಕ ಕ್ರಮ

ಜಿಲ್ಲೆಯಲ್ಲಿ ಒಟ್ಟು 9,33,298 ಜಾನುವಾರುಗಳು

ಬೇಸಿಗೆಯ ಬಿಸಿಯ ನಡುವೆ ಜಾನುವಾರುಗಳ ಕ್ಷೇಮಕ್ಕಾಗಿ ಜಿಲ್ಲಾಡಳಿತ ತೆಗೆದುಕೊಂಡ ಸಕಾಲಿಕ ಕ್ರಮ ಈ ಸಾಲಿನಲ್ಲಿ ಜಾನುವಾರುಗಳ ಮೇವು ಹಾಗೂ ನೀರಿಗೆ ಕೊರತೆ ಬಾರದಂತೆ ಸಾಗಿದೆ. ದಿನಕಳೆದಂತೆ ಹೆಚ್ಚುತ್ತಿರುವ ತಾಪಮಾನದಿಂದಾಗಿ ಕೆರೆ ಕುಂಟೆಗಳ ಜಲಮೂಲ ಬತ್ತುವ ಆತಂಕ ಮನೆಮಾಡಿರುವ ಹೊತ್ತಿನಲ್ಲಿ ಈ ಸಾಲಿನ ಬೇಸಿಗೆಯಲ್ಲಿ ಜಾನುವಾರುಗಳ ಮೇವು ಹಾಗೂ ನೀರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂಬ ಅಂಶ ಹೊರ ಬಿದ್ದಿದೆ.

ಪ್ರಸ್ತುತ ಜಿಲ್ಲೆಯಲ್ಲಿ 34 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ ಎಂದು ಪಶು ಪಾಲನಾ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ಮುಂಗಾರು ಮಳೆ ಸಕಾಲದಲ್ಲಿ ಬಾರದೆ ಪರಿಸ್ಥಿತಿ ಕೈ ಮೇರಿ ಹೋದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

ಹಿಂಗಾರು ಹಂಗಾಮಿನಲ್ಲಿ ರೈತರು ಸಾಕಷ್ಟು ಪ್ರಮಾಣದಲ್ಲಿ ಭತ್ತ, ರಾಗಿ ಹುಲ್ಲು, ಜೋಳದ ಕಡ್ಡಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಇದರ ಜತೆಗೆ ರೈತರಿಗೆ ಈ ಹಿಂದೆ ನೀಡಿದ್ದ ಮೇವಿನ ಮರದ ಸಸಿಗಳನ್ನು ರೈತರು ತಮ್ಮ ಹೊಲದ ಬದುಗಳಲ್ಲಿ ಬೆಳೆಸಿದ್ದು, ಈ ಸಸಿಗಳು ಮರಗಳಾಗಿ ಬೆಳೆದು ನಿಂತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಸಿ ಮೇವು ಸಹ ಜಾನುವಾರುಗಳಿಗೆ ದೊರೆಯುವುದು ಖಾತ್ರಿ ಆಗಿದೆ.

ಇದನ್ನೂ ಓದಿ: Hari Paraak Column: ಬೇಕೂ ಅಂತ ಈ ʼಆಡುʼ ಬರೆದಿಲ್ಲ

ಇದರೊಂದಿಗೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಸ್ತುತ ರೈತರ ಮನೆಗೆಳಿಗೆ ಭೇಟಿ ನೀಡಿ ಲಸಿಕಾ ಕಾರ್ಯಕ್ರಮ ಕೈಗೊಳ್ಳು ತ್ತಿದ್ದಾರೆ. ಜತೆಗೆ ಮೇವು ಹಾಗೂ ನೀರಿನ ಕೊರತೆಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಬೇಸಿಗೆ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿ ತಂಪಾದ ವಾತಾವರಣ ನಿರ್ಮಾಣ ಮಾಡುವಂತೆ, ಬಿಸಿಲಿ ನಲ್ಲಿ ಜಾನುವಾರುಗಳನ್ನು ಮೇಯಿಸದಂತೆ ಹಾಗೂ ನೀರಿನ ತೊಟ್ಟಿಗಳನ್ನು ಶುಚಿಯಾಗಿ ಇಟ್ಟುಕೊಳ್ಳುವಂತೆ ರೈತರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.

1500 ಮಿನಿ ಕಿಟ್ ವಿತರಣೆ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ರೈತರಿಗೆ ಮೇವಿನ 1500 ಮಿನಿ ಕಿಟ್ ವಿತರಣೆ ಮಾಡ ಲಾಗಿದೆ. ಮಾತ್ರವಲ್ಲದೆ, ಯಾವುದೇ ಗ್ರಾಮದಲ್ಲಿ ಮೇವಿನ ಕೊರತೆ ಕಂಡು ಬಂದರೆ ತಕ್ಷಣ ಸ್ಪಂದಿಸಲು ಇಲಾಖೆ ಸಿದ್ಧತೆ ನಡೆಸಿದೆ. ಅಲ್ಲದೇ, ಬಿಸಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾನು ವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ತೊಟ್ಟಿ ನಿರ್ಮಾಣ ಮಾಡಿ ನೀರು ಒದಗಿಸುವ ಕಾರ್ಯ ಮಾಡಲಾ ಗಿದೆ.

ನೀರಿನ ಮೇಲೆ ನಿಗಾ: ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಕಂಡುಬಂದರೆ ಅಂತಹ ಗ್ರಾಮಗಳನ್ನು ತಕ್ಷಣ ಗುರುತಿಸಿ ಕೊಳವೆ ಬಾವಿ ಕೊರೆಸುವ ಹಾಗೂ ಇರುವ ಕೊಳವೆ ಬಾವಿ ದುರಸ್ತಿ ಮಾಡುವ ಕಾಮಗಾರಿ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಬಿಸಿಲಿನ ತಾಪಮಾನ ಹೆಚ್ಚಾದರೆ ಏಪ್ರಿಲ್ ತಿಂಗಳಿನಿಂದ ಕೆಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಳ್ಳದಂತೆ ಕ್ರಮ ವಹಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

image

ಮೈಸೂರು ಜಿಲ್ಲೆಯಲ್ಲಿ ಮುಂದಿನ 34 ವಾರಕ್ಕೆ ಸಾಕಾಗುವಷ್ಟು ಮೇವಿನ ದಾಸ್ತಾನು ಇದೆ. ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ಸುರಿದ ಉತ್ತಮ ಮಳೆಯಿಂದ ಜಿಲ್ಲೆಯಲ್ಲಿ ಹಸಿರು ಕಾಣಿಸಿಕೊಂಡಿರುವುದು ಮೇವಿನ ಸಮಸ್ಯೆಯನ್ನು ದೂರ ಮಾಡಿದೆ. ಕುಡಿಯುವ ನೀರಿನ ಸಮಸ್ಯೆ ಈವರೆಗೆ ಕಂಡು ಬಂದಿಲ್ಲ.

-ಸಿ.ನಾಗರಾಜು, ಉಪ ನಿರ್ದೇಶಕ, ಪಶುವೈದ್ಯಕೀಯ ಸೇವಾ ಇಲಾಖೆ