ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವೈದ್ಯಕೀಯ ಪ್ರಮಾಣಪತ್ರ ಇಲ್ಲದೆ ವೃತ್ತಿ: ಬೀದರ್‌ʼನಲ್ಲಿ 213 ನಕಲಿ ವೈದ್ಯರು ?

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು, ನಕಲಿ ವೈದ್ಯರಿಂದ ಹಳ್ಳಿಗಳ ಮುಗ್ದ ಜನರ ಜೀವ ಅಪಾಯದಲ್ಲಿದೆ. ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳನ್ನು ಬೀರುವ ಹೆಚ್ಚಿನ ಡೋಸ್‌ನ ಔಷಧಿಗಳನ್ನು ಕ್ಲಿನಿಕ್‌ಗಳಲ್ಲಿ ಇಟ್ಟಿರುವುದು ಆರೋಗ್ಯ ಇಲಾಖೆಯ ಅಧಿಕಾರಿಗಳು ನಡೆಸಿರುವ ದಾಳಿಯ ವೇಳೆ ಅಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಚನ್ನಬಸವ ಮೋಕ್ತೆದಾರ

ಬೀದರ್: ನಕಲಿ ಔಷಧ ದಂಧೆ ರಾಜ್ಯವನ್ನು ತಲ್ಲಣಗೊಳಿಸಿರುವ ಬೆನ್ನಲ್ಲೇ ಬೀದರ್ ಜಿಲ್ಲೆಯಲ್ಲಿ 213 ನಕಲಿ ವೈದ್ಯರು ಕರ್ತವ್ಯ ನಿರ್ವಹಣೆ ಮಾಡುತ್ತಿರುವುದು ಆತಂಕಕ್ಕೀಡು ಮಾಡಿದೆ. ಹಣದಾಸೆಗಾಗಿ ಜನರ ಜೀವಕ್ಕೆ ಕುತ್ತು ತರುತ್ತಿರುವ ನಕಲಿ ವೈದ್ಯರಿಂದ ಚಿಕಿತ್ಸೆ ಪಡೆದಿರುವ ಹಲವರು ನಾನಾ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿ ಜೀವನ ಪಯಂತ ನೋವು ಅನುಭವಿಸು ತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 213 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆಯ ಅಽಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಜಿಪಂ ಸಿಇಒ ಅವರು ಭಾಲ್ಕಿ ತಾಲೂಕಿನ ಬೀರಿ ಗ್ರಾಮಕ್ಕೆ ಭೇಟಿ ನೀಡಿದಾಗ ನಕಲಿ ವೈದ್ಯನೊಬ್ಬ ವಿಚಾರಣೆ ನಡೆಸಿದರು. ಕೆಲವು ದಿನಗಳ ಹಿಂದೆ ಔರಾದ್ ತಾಲೂಕಿನ ಜಂಬಗಿ ಹಾಗೂ ಕಮಲನಗರ ತಾಲೂಕಿನ ಚಾಂದೋರಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದರು. ಆದರೂ ಕೂಡ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಯಾವುದೇ ಅರ್ಹತೆ ಇಲ್ಲದ ವ್ಯಕ್ತಿಗಳು ಕ್ಲಿನಿಕ್ ಗಳನ್ನು ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು, ನಕಲಿ ವೈದ್ಯರಿಂದ ಹಳ್ಳಿಗಳ ಮುಗ್ದ ಜನರ ಜೀವ ಅಪಾಯದಲ್ಲಿದೆ. ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳನ್ನು ಬೀರುವ ಹೆಚ್ಚಿನ ಡೋಸ್‌ನ ಔಷಧಿಗಳನ್ನು ಕ್ಲಿನಿಕ್‌ಗಳಲ್ಲಿ ಇಟ್ಟಿರುವುದು ಆರೋಗ್ಯ ಇಲಾಖೆಯ ಅಧಿಕಾರಿಗಳು ನಡೆಸಿರುವ ದಾಳಿಯ ವೇಳೆ ಅಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ಸೆಕ್ಯೂರಿಟಿ ಗಾರ್ಡ್‌ನ ಕೊಂದು, 83 ಲಕ್ಷ ದೋಚಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಗ್ರಾಮೀಣ ಪ್ರದೇಶಗಳಲ್ಲಿ ಇವರ ಹಾವಳಿ ವಿಪರೀತವಾಗಿದೆ. ಆದರೆ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಯಾವುದೇ ಪರಿಣಾಮಕಾರಿಯಾಗಿ ದಾಳಿ ನಡೆಸುತ್ತಿಲ್ಲ ಎನ್ನುವ ಆರೋಪ ಜನ ಸಾಮಾನ್ಯರಲ್ಲಿ ಕೇಳಿ ಬರುತ್ತಿದೆ.

ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅನಧಿಕೃತ ಆಸ್ಪತ್ರೆಗಳು. ಕ್ಲಿನಿಕ್ ಗಳು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬೇರು ಬಿಟ್ಟಿವೆ. ವೈದ್ಯರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಅಮಾಯಕರ ಪ್ರಾಣದಲ್ಲಿ ಚೆಲ್ಲಾಟವಾಡುವ ನಕಲಿ ವೈದ್ಯರ ಹಾವಳಿ ನಿಯಂತ್ರಿಸಿ ಜನರ ಪ್ರಾಣ ಉಳಿಸುವ ಕೆಲಸ ಆರೋಗ್ಯ ಇಲಾಖೆ ಮಾಡಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕಾವಲು ಪಡೆ) ಜಿಲ್ಲಾಧ್ಯಕ್ಷ ಅವಿನಾಶ್ ಬುಧರಕರ್ ಆಗ್ರಹಿಸಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಥ್

ಜಿಲ್ಲೆಯಲ್ಲಿ ನಕಲಿ ವೈದ್ಯರು ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳು ನಡೆಸುತ್ತಿರುವುದು ಆರೋಗ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಇದ್ದರು ಕೂಡ ಯಾವುದೇ ಕ್ರಮಕೈಗೊಳ್ಳಲು ಹಿಂದೇಟು ಹಾಕಲಾಗುತ್ತಿದೆ. ಆಯಾ ತಾಲೂಕು ಆರೋಗ್ಯ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.

image

ಯಾವುದೇ ಕಾರಣಕ್ಕೂ ವೈದ್ಯಕೀಯ ಪ್ರಮಾಣ ಪತ್ರ ಇಲ್ಲದೆ ವೈದ್ಯಕೀಯ ವ್ರತಿ ಅಥವಾ ಕ್ಲಿನಿಕ್ ನಡೆಸಬಾರದು. ಹೊರ ರಾಜ್ಯಗಳಿಂದ ಬಂದು ಬೀದರ್ ಜಿಲ್ಲೆಯಲ್ಲಿ ನಕಲಿ ವೈದ್ಯರು ವೃತ್ತಿಯಲ್ಲಿ ತೊಡಗಿರುವುದು ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು.

- ಅನಿಲ್ ಚಿಂತಾಮಣಿ, ಪ್ರಭಾರಿ ಡಿಎಚ್‌ಒ