ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಚಿವ ಸ್ಥಾನಕ್ಕೆ ಸವದಿ ಪಟ್ಟು, ಲಕ್ಮೀ ನಿರೀಕ್ಷೆ

ರಾಜಕೀಯವಾಗಿ ಪ್ರಬಲ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 11 ಕಾಂಗ್ರೆಸ್ ಶಾಸಕರಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ ಈಗಾಗಲೇ ಸಚಿವರಾಗಿದ್ದಾರೆ. ಇನ್ನುಳಿದ ಹತ್ತು ಜನರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದ್ದು ಶಾಸಕರ ನಡುವೆ ಪೈಪೋಟಿ ಏರ್ಪಟ್ಟಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಈ ಬಾರಿ ಡಿಕೆಶಿ ಸಂಪುಟದಲ್ಲಿ ಸಚಿಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ವಿನಾಯಕ ಮಠಪತಿ ಬೆಳಗಾವಿ

ಪಕ್ಷಕ್ಕೆ ಬರುವ ಮುನ್ನ ಕೊಟ್ಟ ಮಾತಿನಂತೆ ಹೈಕಮಾಂಡ್ ನಡೆದುಕೊಳ್ಳಲಿ: ಶಾಸಕ ಲಕ್ಷ್ಮಣ ಸವದಿ

ಸಚಿವ ಸಂಪುಟ ವಿಸ್ತರಣೆ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ದಲ್ಲಿ ಸಚಿವರಾಗುವ ಬಯಕೆ ಹೊತ್ತವರ ದೊಡ್ಡ ತಂಡವೇ ಕಾಂಗ್ರೆಸ್‌ನಲ್ಲಿದೆ. ಈ ಮಧ್ಯೆ ಬೆಳಗಾವಿ ಕಾಂಗ್ರೆಸ್ ಶಾಸಕರು ಸಚಿವ ಸ್ಥಾನ ಪಡೆಯಲು ತೆರೆ ಮರೆಯಲ್ಲಿ ಕಸರತ್ತು ಮುಂದುವರಿಸಿದ್ದು, ಯಾರಿಗೆ ಮಂತ್ರಿ ಭಾಗ್ಯ ಲಭಿಸಲಿದೆ ಎಂಬ ಕುತೂಹಲ ಸಾಮಾನ್ಯವಾಗಿ ಮನೆಮಾಡಿದೆ.

ರಾಜಕೀಯವಾಗಿ ಪ್ರಬಲ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 11 ಕಾಂಗ್ರೆಸ್ ಶಾಸಕರಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ ಈಗಾಗಲೇ ಸಚಿವರಾಗಿದ್ದಾರೆ. ಇನ್ನುಳಿದ ಹತ್ತು ಜನರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದ್ದು ಶಾಸಕರ ನಡುವೆ ಪೈಪೋಟಿ ಏರ್ಪಟ್ಟಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಈ ಬಾರಿ ಡಿಕೆಶಿ ಸಂಪುಟದಲ್ಲಿ ಸಚಿಸ್ಥಾನ ಸಿಗುವ ನಿರೀಕ್ಷೆ ಯಲ್ಲಿದ್ದಾರೆ.

ಬೆಳಗಾವಿ ಜಿಲ್ಲೆಗೆ ಎರಡಕ್ಕಿಂತ ಅಧಿಕ ಸಚಿವಸ್ಥಾನ ಸಿಗುವುದು ಅಷ್ಟೊಂದು ಸಲೀಸಾಗಿಲ್ಲ. ಸತೀಶ್ ಜಾರಕಿಹೊಳಿ ಹೊರತಾಗಿ ಒಬ್ಬರನ್ನು ಮಾತ್ರ ಪರಿಗಣಿಸುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೆ ಯಾರಿಗೆ ಸಂಪುಟದಲ್ಲಿ ಸ್ಥಾನ ಕೊಟ್ಟರು ಇನ್ನುಳಿದವರು ಮುನಿಸಿಕೊಳ್ಳುವ ಸಾಧ್ಯತೆ ಇದ್ದು, ಈ ವಿಷಯ ಕಾಂಗ್ರೆಸ್ ನಾಯಕರಿಗೆ ತಲೆನೋವು ತರಿಸಿದ್ದಂತು ಸುಳ್ಳಲ್ಲ. ರೇಸ್‌ನಲ್ಲಿ ಅಶೋಕ್ ಪಟ್ಟಣ: ಸಿದ್ದರಾಮಯ್ಯನವರ ಪರಮಾಪ್ತ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಅವರೂ ಸಚಿವಸ್ಥಾನದ ರೇಸ್‌ನಲ್ಲಿದ್ದಾರೆ. ಪಕ್ಷಕ್ಕಾಗಿ ನಾವು ಮಾಡಿರುವ ಸೇವೆ ಗುರುತಿಸಿ ಸಚಿವಸ್ಥಾನ ನೀಡಿ ಎಂದು ಕಾಂಗ್ರೆಸ್ ನಾಯಕರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಿರಿತನದ ಆಧಾರದ ಮೇಲೆ ಮಂತ್ರಿ ಸ್ಥಾನದ ಸಿಗುತ್ತದೆ ಎಂಬುದು ಅಶೋಕ್ ಪಟ್ಟಣ ಅವರ ವಾದವಾಗಿದೆ.

ಇದನ್ನೂ ಓದಿ: MLA Shivaram Hebbar: ಆಡಳಿತ ಮಂಡಳಿಗೆ ಅವಿರೋಧ ಆಯ್ಕೆಯು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ: ಶಿವರಾಮ ಹೆಬ್ಬಾರ್

ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಸವದಿ ಪಟ್ಟು ಎಂಎಲ್‌ಎ ಟಿಕೆಟ್ ವಂಚನೆ ನಂತರ 2023ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು ಎಂದು ಸ್ವತಃ ಲಕ್ಷ್ಮಣ ಸವದಿ ಬಹಿರಂಗವಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಸಂಪುಟ ದಲ್ಲಿ ಸಚಿವಸ್ಥಾನ ತಪ್ಪಿದ್ದು ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಕೊಟ್ಟ ಭರವಸೆ ಈಡೇರುತ್ತದೆ ಎಂಬ ನಿರೀಕ್ಷೆಯಲ್ಲಿ ಸವದಿ ಇದ್ದಾರೆ.

ಚುನಾವಣೆ ಪೂರ್ವದಲ್ಲಿ ನನಗೆ ಕೊಟ್ಟ ಭರವಸೆ ಈಡೇರಿಸಿ ಎಂದು ಲಕ್ಷ್ಮಣ ಸವದಿ ಹೈಕಮಾಂಡ್ ನಾಯಕರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡುವ ಕುರಿತು ಸಿಎಂ ಕೂಡ ಆಸಕ್ತಿ ಹೊಂದಿದ್ದಾರೆ. ಆದರೆ ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾದ ಸತೀಶ್ ಜಾರಕಿಹೊಳಿ ಅವರ ಬೆಂಬಲ ಸವದಿಗೆ ಸಿಗುತ್ತದೆಯಾ ಎಂಬ ಯಕ್ಷ ಪ್ರಶ್ನೆ ಈಗಲೂ ಮುಂದುವರಿದಿದೆ.

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಹೆಬ್ಬಾಳಕರ್ ಸಿದ್ದರಾಮಯ್ಯ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಲಕ್ಷ್ಮೀ ಹೆಬ್ಬಾಳಕರ್ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಇದ್ದಾರೆ. ಜತೆಗೆ ಮೊದಲಿನಿಂದಲೂ ಡಿಕೆಶಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಹೈಕಮಾಂಡ್ ನಾಯಕರ ಜೊತೆಗೂ ಉತ್ತಮ ಬಾಂಧವ್ಯ ಹೊಂದಿ ದ್ದಾರೆ. ಅಷ್ಟೇ ಅಲ್ಲದೆ ಸಂಘಟನೆ ದೃಷ್ಟಿಯಿಂದಲೂ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವಸ್ಥಾನ ನೀಡುವ ಕುರಿತು ಹೈಕಮಾಂಡ್ ಗಂಭೀರವಾಗಿ ಚಿಂತನೆ ನಡೆಸಿದೆ.