ಮಾಳಿಂಗರಾಯ ಪೂಜಾರ ಗದಗ
ಗದಗ ಬೆಟಗೇರಿ ನಗರಸಭೆ ಸದಸ್ಯರ ಬಲಾಬಲ ೩೫
ಬಿಜೆಪಿ ೧೮, ಕಾಂಗ್ರೆಸ್ನ ೧೭ ಸದಸ್ಯರು
ತೀವ್ರ ಕುತೂಹಲ ಕೆರಳಿಸಿದ್ದ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ನಗರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವಂತೆ ಸಲ್ಲಿಸಿದ್ದ, ಇಬ್ಬರು ವಿಧಾನ ಪರಿಷತ್ ಸದಸ್ಯ ಅರ್ಜಿ ಯನ್ನು ಮತದಾನ ನೋಂದಣಿ ಅಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳು ತಿರಸ್ಕರಿಸಿದ ಆದೇಶ ಹೊರಡಿಸಿ ಕುತೂಹಲಕ್ಕೆ ತೆರೆಬಿದ್ದಿದೆ.
ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಗೆ ಭಾರೀ ಪೈಪೋಟಿ ನಡೆದಿದ್ದು, ಕಾಂಗ್ರೆಸ್, ಬಿಜೆಪಿ ಅಧಿಕಾರದ ಗದ್ದುಗೆ ಏರಲು ನಾನಾ ಕಸರತ್ತು ನಡೆದಿದೆ ಇದರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ, ಸ್ಥಳೀಯ ಜನಪ್ರತಿನಿಧಿಗಳಿಂದ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹಾಗೂ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಇವರಿಬ್ಬರೂ ಗದಗ ನಗರದ ಮತದಾನ ಪಟ್ಟಿಗೆ ಸೇರ್ಪಡೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಇಬ್ಬರಿಗೂ ಮತದಾನ ಪಟ್ಟಿಯಲ್ಲಿ ಸೇರ್ಪಡೆ ಮಾಡಿದರೆ ಗದಗ ಬೆಟಗೇರಿ ನಗರಸಭೆಯಲ್ಲಿ ಮತದಾನಕ್ಕೆ ಅವಕಾಶ ನೀಡಿದಂತಾಗುತ್ತದೆ.
ಏಕೆಂದರೆ ಒಟ್ಟು ೩೫ ಸದಸ್ಯರ ಬಲವನ್ನು ಹೊಂದಿದ್ದು, ಅದರಲ್ಲಿ ಬಿಜೆಪಿ ೧೮ ಹಾಗೂ ಕಾಂಗ್ರೆಸ್ ೧೭ ಸದಸ್ಯರು ಇದ್ದಾರೆ. ಮೊದಲ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಒಂದು ಮತ ಕಡಿಮೆ ಇರುವದರಿಂದ ಅಧಿಕಾರ ಕಳೆದುಕೊಂಡಿತ್ತು. ಈ ಬಾರಿಯಾದರೂ ಅಽಕಾರದ ಗದ್ದುಗೆ ಏರಲು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರ ಹಾವೇರಿಯ ಮತದಾನ ಪಟ್ಟಿಯಲ್ಲಿರುವ ಹೆಸರನ್ನು ಗದಗ ನಗರದ ಚುನಾವಣಾ ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಅರ್ಜಿ ಸಲ್ಲಿಸಿದ್ದರು ಇದಕ್ಕೆ ಬಿಜೆಪಿಯವರು ವಿರೋಧ ವ್ಯಕ್ತ ಪಡಿಸಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಗೆ ಕಾಂಗ್ರೆಸ್ ನವರ ವಿರೋಧ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದ್ದರು ಇಬ್ಬರ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಿ ಅವರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಸೆ.೦೨ ರಂದು ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ.
ಒಟ್ಟಾರೆ ಎರಡು ಪಕ್ಷಗಳು ರಾಜಕೀಯ ತಂತ್ರಗಾರಿಕೆ ಜತೆ ಕಾನೂನು ಸಂಘರ್ಷ ಒಂದಕ್ಕೆ ತೆರೆ ಕಂಡಿದ್ದು, ಒಂದು ಈ ಸಂದರ್ಭದಲ್ಲಿ ಯಾವುದಾದರೂ ಒಂದು ಪಕ್ಷದ ವಿಧಾನ ಪರಿಷತ್ ಸದಸ್ಯರಿಗೆ ಮತದಾರ ಪಟ್ಟಿ ಯಲ್ಲಿ ಸೇರ್ಪಡೆಗೆ ಅವಕಾಶ ನೀಡಿದರೆ ಮುಂದೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ಸಿಗಬಹುದು ಅದರಿಂದ ರಾಜಕೀಯ ತಂತ್ರಗಾರಿಕೆ ಗಮನಿಸಿ ಎರಡು ಅರ್ಜಿ ತಿರಸ್ಕರಿಸಿದೆ ಎನ್ನಬಹುದು.
*
ಗದಗ ನಗರದ ನಿವಾಸಿ ಆಗಿದ್ದು, ನಮ್ಮ ಮತದಾರ ಪಟ್ಟಿಯಲ್ಲಿ ಸೇರಿಸಲು ಅರ್ಜಿ ಸಕ್ಕಿಸಿದ್ದೆ ಆದರೆ ಅರ್ಜಿ ತಿರಸ್ಕಾರ ಆಗಿರುವ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು.
-ಪ್ತೊ.ಎಸ್.ವಿ.ಸಂಕನೂರ ವಿಧಾನ ಪರಿಷತ್
ಸದಸ್ಯರು