Monday, 16th May 2022

6 ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ

ಬೆಂಗಳೂರು : ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳನ್ನಾಗಿ ವಿಭಜಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, 6 ತಾಲೂಕು ಗಳನ್ನು ಸೇರಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಸೇರಿ ಒಟ್ಟು 6 ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಹೊಸಪೇಟೆಯು ಜಿಲ್ಲೆಯ ಮುಖ್ಯ ಕಚೇರಿ ಸ್ಥಳವಾಗಿರಲಿದೆ ಎಂದು ಹೇಳಿದರು.

ಉಳಿದ ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗಗಳಾಗಿರುತ್ತವೆ.