Friday, 3rd February 2023

ಗಾಂಧೀಜಿಯವರ ಸ್ಮರಣಾರ್ಥ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಕುಷ್ಠರೋಗ ನಿರ್ಮೂಲನೆ ಮಾಡುವ ಸಲುವಾಗಿ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿ ಯಾನ ಹಮ್ಮಿಕೊಂಡಿದ್ದು, ಆಡಳಿತಗಾರರು ಹಾಗೂ ಆಯುಕ್ತರು ಅಭಿಯಾ ನಕ್ಕೆ ಚಾಲನೆ ನೀಡಿದರು.

ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಷ್ಠ ರೋಗ ನಿರ್ಮೂಲನೆ ಮಾಡುವ ಕಾರ್ಯಕ್ರಮ ರೂಪಿಸಿಕೊಂಡಿದ್ದು, ಜನವರಿ 30 ರಿಂದ ಫೆಬ್ರವರಿ 13ರವರೆಗೆ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದರು‌.

ಸರ್ವೋದಯ ದಿನಾಚರಣೆ ಮುಗಿದ ಬಳಿಕ ಮಾತನಾಡಿದ ಆಯುಕ್ತರು, 2016-17 ಸಾಲಿನಿಂದ ಪಾಲಿಕೆ ವ್ಯಾಪ್ತಿಯಲ್ಲಿ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮ ಅನುಷ್ಠಾನಗೊಂಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಿದ್ದು, 141 ಆರೋಗ್ಯ ಕೇಂದ್ರ ಗಳು, 5 ಸಾರ್ವಜನಿಕ ಆಸ್ಪತ್ರೆಗಳು, 6 ವೈದ್ಯಕೀಯ ಕಾಲೇಜು/ಆಸ್ಪತ್ರೆಗಳು, 2 ಸ್ವಯಂಸೇವಾ ಸಂಸ್ಥೆಗಳು ಸದರಿ ಕಾರ್ಯ ಕ್ರಮ ದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಕುಷ್ಠರೋಗ ನಿರ್ಮೂಲನಕ್ಕೆ ಮುಂದಾಗಿರುವ ಪಾಲಿಕೆಯ ಆರೋಗ್ಯ ಇಲಾಖೆ, ಜನವರಿ 30 ರಿಂದ ಫೆಬ್ರವರಿ 13 ರ ವರೆಗೆ “ಕುಷ್ಠ ರೋಗ ವಿರುದ್ಧ ಅಂತಿಮ ಹೋರಾಟ” ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಂಡಿದೆ‌. ಈ ಸಂದರ್ಭ ಎಲ್ಲಾ ವೈದ್ಯರು ಹಾಗೂ ಪಾಲಿಕೆಯ ಸಿಬ್ಬಂದಿ ಕುಷ್ಠರೋಗ ಮುಕ್ತ ಪಾಲಿಕೆ ನಿರ್ಮಾಣದ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ. ಆಂದೋಲನದ ಮೂಲಕ ಜನರನ್ನು ಸಂಪರ್ಕಿಸಿ, ರೋಗದ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಅರಿವು ಮೂಡಿಸಲಾಗುತ್ತೆ.

ಇದೇ ವೇಳೆ ಕುಷ್ಠರೋಗ ಪತ್ತೆ ಕಾರ್ಯ ನಡೆಸಲಾಗುವುದು. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ಕೂಡಲೆ ಎಲ್ಲಾ ಪಾಲಿಕೆ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.

ಸರ್ವೋದಯ ದಿನಾಚರಣೆ: ಸರ್ವೋದಯ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿ ಯವರ ಪ್ರತಿಮೆಗೆ ಇಂದು ಮಾನ್ಯ ಆಡಳಿತಗಾರರು ಶ್ರೀ ಗೌರವ್ ಗುಪ್ತಾ ಹಾಗೂ ಮಾನ್ಯ ಆಯುಕ್ತರು ಶ್ರೀ ಎನ್.ಮಂಜುನಾಥ್ ಪ್ರಸಾದ್ ರವರು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ಮನೋಜ್ ಜೈನ್, ಬಸವರಾಜು, ಜೆ.ಮಂಜುನಾಥ್, ಡಿ.ರಂದೀಪ್, ರವೀಂದ್ರ, ಪೂರ್ವ ವಲಯ ಜಂಟಿ ಆಯುಕ್ತರು ಪಲ್ಲವಿ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಎಂ.ಆರ್.ವೆಂಕಟೇಶ್, ಮಾಜಿ ಮಹಾಪೌರರು ಗಳಾದ ಶ್ರೀಮತಿ ಜಿ.ಪದ್ಮಾವತಿ, ಶ್ರೀ ಜೆ.ಹುಚ್ಚಪ್ಪ, ಶ್ರೀ ರಾಮಚಂದ್ರಪ್ಪ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!