Wednesday, 28th July 2021

ಕಬ್ಬು ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಸುವರ್ಣಸೌಧದ ಮುಂದೆ ಪ್ರತಿಭಟನೆ

ಬೆಳಗಾವಿ: ಕಬ್ಬು ಬೆಳೆಗೆ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ, ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು, ಇದರ ನಿಯಂತ್ರಣ ಸಂಬಂಧ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಖುದ್ದು ಸಿಎಂ ಯಡಿಯೂರಪ್ಪ ಶುಕ್ರವಾರ ಜಿಲ್ಲೆಗೆ ಭೇಟಿ ನೀಡಲಿದ್ದು, ಸುವರ್ಣಸೌಧದಲ್ಲಿ ಸಭೆ ನಡೆಸ ಲಿದ್ದಾರೆ.

ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮನವೊಲಿಕೆ ಯತ್ನ ನಡೆಸಿ ದರೂ, ರೈತರು ಸಿಎಂ ಯಡಿಯೂರಪ್ಪ ಅವರ ಜೊತೆ ಮಾತನಾಡಬೇಕಿದೆ. 1,500 ಕೋಟಿ ಕಬ್ಬಿನ ಬಿಲ್ ಬಾಕಿಯಿದೆ. ಈ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಬೇಕಿದೆ ಅವಕಾಶ ನೀಡಿ ಎಂದು ಹೇಳಿದ್ದಾರೆ. ವಾಗ್ವಾದ ನಡೆದು ಅಂತಿಮವಾಗಿ ರೈತರನ್ನು ಹಿರೇ ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *