ಶಿರಸಿ: ಕೇಂದ್ರ ಆಯುಷ್ ಸಚಿವರಾದ ಶ್ರೀ ಶ್ರೀಪಾದ ನಾಯ್ಕ ಅವರ ಧರ್ಮಪತ್ನಿ ಶ್ರೀಮತಿ ವಿಜಯಾ ಶ್ರೀಪಾದ ನಾಯ್ಕ ಅವರು ಅಪಘಾ ದಲ್ಲಿ ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.
ಸೋಮವಾರ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ. ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ ಹಾಗೂ ಶ್ರಿಪಾದ ನಾಯಕರು ಅತೀ ಶೀಘ್ರ ಗಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ !!! ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ.