Friday, 9th December 2022

ಕಾರುಗಳ ಮಧ್ಯೆ ಧೂಳೆಬ್ಬಿಸಿಕೊಂಡು ಸಾಗಿದ ಕಾರು: ಚಾಲಕನಿಗೆ ಗಾಯ

ಚಿಕ್ಕಮಗಳೂರು: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎರಡು ಕಾರುಗಳ ಮಧ್ಯೆ ಧೂಳೆಬ್ಬಿಸಿಕೊಂಡು ಸಾಗಿ ಅಪಘಾತ ಸಂಭವಿಸಿದೆ. ಕಾರು ನುಗ್ಗಿದ ರಭಸಕ್ಕೆ ಭಾರಿ ಧೂಳೆದ್ದಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರುಗಳು ಬಹುತೇಕ ಜಖಂಗೊಂಡಿವೆ. ಕಾರು ನುಗ್ಗಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾರು ಸಾಗಿದ ದಾರಿಯಲ್ಲಿ ಯಾರೂ ಇಲ್ಲದ್ದರಿಂದ ಅದೃಷ್ಟವಶಾತ್ ಸಾವು-ನೋವು ತಪ್ಪಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.