Friday, 7th May 2021

ಕಾರು ನಿಯಂತ್ರಣ ತಪ್ಪಿ, ಪಲ್ಟಿ: ಇನ್ಸ್’ಪೆಕ್ಟರ್’ಗೆ ಗಂಭೀರ ಗಾಯ

ಹುಬ್ಬಳ್ಳಿ: ಶಿವಮೊಗ್ಗದಿಂದ ಬೆಳಗಾವಿಗೆ ಹೊರಟಿದ್ದ ಕಾರೊಂದು ನಿಯಂತ್ರಣ ತಪ್ಪಿ ನಗರದ ಹೊರವಲಯದ ರಾಯನಾಳ ಸಮೀಪದ ಬೈಪಾಸ್ ನಲ್ಲಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಬೆಳಗಾವಿ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಗಂಭೀರವಾಗಿ ಗಾಯ ಗೊಂಡಿದ್ದು, ಸಂಬಂಧಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಭಟ್ಕಳದ ಗುಪ್ತವಾರ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸಪೆಕ್ಟರ್ ಮಹಾಬಳೇಶ್ವರ ನಾಯಕ ಗಂಭೀರ ಗಾಯಗೊಂಡಿದ್ದು, ಅವರ ಸಂಬಂಧಿಕರೊಬ್ಬರು ಮೃತಪಟ್ಟಿದ್ದಾರೆ.

ಸ್ವೀಪ್ಟ್ ಕಾರಿನಲ್ಲಿ ಹೊರಟಿದ್ದ ಸಮಯದಲ್ಲಿ ದುರ್ಘಟನೆ ನಡೆದಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ನಗರದ ಕೆಎಲ್ಇ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಎದೆ ಮತ್ತು ಹಿಂಭಾಗದಡಿ ಬಲವಾದ ಹೊಡೆತ ಬಿದ್ದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಘಟಕದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು. ಆಸ್ಪತ್ರೆಗೆ ತೆರಳಿ ಆರೋಗ್ಯದ ಬಗ್ಗೆ ವೈದ್ಯರಲ್ಲಿ ವಿಚಾರಿಸಿದ್ದಾರೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *