ಮಂಡ್ಯ: ಶುಕ್ರವಾರ ಬೆಳಿಗ್ಗೆ ಮಳವಳ್ಳಿ ತಾಲ್ಲೂಕು ಹಲಗೂರು ಬಳಿ ಹಳ್ಳಕ್ಕೆ ಉರುಳಿ ಬಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಬಾಲಕ ಸೇರಿ ಮೂವರು ಸಜೀವವಾಗಿ ದಹನಗೊಂಡಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶೇಖ್ ಫೈಸಲ್ (44), ಮೆಹಕ್ (33), ಶೇಖ್ ಆಯಿನ್ (11) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು ಚಾಮರಾಜನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದರು.
ಹಲಗೂರು ಪಟ್ಟಣ ದಾಟಿ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಹಳ್ಳಕ್ಕೆ ಬಿದ್ದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.