ಕಾರಿನಲ್ಲಿದ್ದ ಏಳು ಮಂದಿಯ ಪೈಕಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿರುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಯಾದಗಿರಿ ಜಿಲ್ಲೆಯ ಶಹಾಪೂರದವರು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಹೊಸಪೇಟೆಗೆ ಹೋಗುವ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.
ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.