Saturday, 27th February 2021

150 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು: ಐವರು ಪಾರು

ಚಿಕ್ಕಮಗಳೂರು: ಕಾರು ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ಸಂಭವಿಸಿದೆ.

ರಸ್ತೆ ಮಾರ್ಗ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರೂ ಕಂದಕದಲ್ಲಿ ಸಿಲುಕಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದೆ.

ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

Leave a Reply

Your email address will not be published. Required fields are marked *