Friday, 7th May 2021

ಕಹಾನಿ ಮೇ ಟ್ವಿಸ್ಟ್‌: ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು, ಉಲ್ಟಾ ಹೊಡೆದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸೋಮವಾರ ಸ್ಫೋಟಕ ತಿರುವು ಸಿಕ್ಕಿದೆ. ಎಸ್‌ಐಟಿ ಅಧಿಕಾರಿಗಳ ಮುಂದೆ ಸಿಡಿ ಯುವತಿ ಉಲ್ಟಾ ಹೊಡೆದಿದ್ದಾಳೆ.

ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಯುವತಿ, ನನ್ನನ್ನು ಹನಿ ಟ್ರ್ಯಾಪ್ ಗೆ ಸಿಲುಕಿಸಿ ಈ ರೀತಿ ಕೃತ್ಯ ಎಸಗ ಲಾಗಿದೆ. ಕಿಂಗ್ ಪಿನ್ ಗಳಾದ ಮಾಜಿ ಪತ್ರಕರ್ತ ನರೇಶ್ ಹಾಗೂ ಶ್ರವಣ್ ಹನಿಟ್ರ್ಯಾಪ್ ಗೆ ನನ್ನನ್ನು ಬಳಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.

ಈ ಹೇಳಿಕೆ ಮೇರೆಗೆ ಎಸ್‌ಐಟಿ ಅಧಿಕಾರಿಗಳು ಮತ್ತೊಮ್ಮೆ ಸಿಡಿ ಲೇಡಿಯನ್ನು ಜಡ್ಜ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *