Tuesday, 21st March 2023

ಸಿಇಸಿ ಸುಶೀಲ್ ಚಂದ್ರ, ಇಸಿ ರಾಜೀವ್ ಕುಮಾರ್’ಗೆ ಕರೋನಾ ಸೋಂಕು ದೃಢ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಮತ್ತು ಚುನಾವಣಾ ಆಯುಕ್ತ (ಇಸಿ) ರಾಜೀವ್ ಕುಮಾರ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ಇಬ್ಬರೂ ಅಧಿಕಾರಿಗಳು ತಮ್ಮನ್ನ ಮನೆಯಲ್ಲಿಯೇ ಪ್ರತ್ಯೇಕಿಸಿಕೊಂಡಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುಶೀಲ್ ಅವರು ಏ.13ರಂದು 24 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.

ಚಂದ್ರ ಅವರನ್ನು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಫೆಬ್ರವರಿ 14, 2019ರಲ್ಲಿ ಚುನಾವಣಾ ಆಯುಕ್ತರನ್ನಾಗಿ ನೇಮಿಸ ಲಾಯಿತು. ಅವರ ಅಡಿ ಯಲ್ಲಿ, ಆಯೋಗವು ಗೋವಾ, ಮಣಿಪುರ, ಉತ್ತರಾಖಂಡ್, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಗಳನ್ನು ನಡೆಸಲಿದೆ.

ಚಂದ್ರಾ ಅವರು 39 ವರ್ಷಗಳ ಕಾಲ ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡಿದ್ದಾರೆ.

error: Content is protected !!