Saturday, 27th February 2021

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿ, ಸಚಿವರ ಪತ್ನಿ ದಾರುಣ ಸಾವು

ಶಿರಸಿ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಮಗುಚಿ, ಕೇಂದ್ರ ಆಯುಷ್ ಖಾತೆ ಸಚಿವರಾದ ಶ್ರೀಪಾದ್‌ ನಾಯಕ್ ಪತ್ನಿ ವಿಜಯಾ ಶ್ರೀಪಾದ್ ನಾಯಕ್ ಮೃತಪಟ್ಟರು.

ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಘಟನೆ ನಡೆದಿದೆ.  ಕಾರಿ ನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ ಪ್ರಕಾರ, ಘಟನೆಯಲ್ಲಿ ಸಚಿವರ ಆಪ್ತಕಾರ್ಯದರ್ಶಿ ದೀಪಕ ರಾಮದಾದ ಗೂಮೆ ಕೂಡಾ ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *