ಬಂಡೀಪುರದಲ್ಲಿ ಹುಲಿ ದಾಳಿಯಿಂದ ಫಾರೆಸ್ಟ್ ವಾಚರ್ ಸಾವು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಳಹಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ ಮಾಡಿ ಕೊಂದಿದೆ.