Wednesday, 28th July 2021

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಪೋಟ: ಐದು ಮಂದಿ ಸಾವು

ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಸ್ಪೋಟದ ನೆನಪು ಇನ್ನೂ ಜನಸಾಮಾನ್ಯರು ಮರೆತಿಲ್ಲ. ಆಗಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ನಡೆದಿದೆ. ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಪೋಟದಲ್ಲಿ ಐವರು ಮೃತಪಟ್ಟು, ಓರ್ವ ಗಾಯಗೊಂಡಿದ್ದಾರೆ.

ಜಿಲೆಟಿನ್ ಸ್ಫೋಟದಲ್ಲಿ ಮೃತರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಸ್ಪೋಟದ ತೀವ್ರತೆಗೆ ಸುಮಾರು 10 ಕಿ.ಮೀಟರ್ ದೂರದವರೆಗೂ ಭೂಮಿ ಕಂಪಿಸಿದ ಅನುಭವವಾಗಿದೆ. ನೂರಾರು ಮೀಟರ್ ದೂರದವರೆಗೆ ಮೃತದೇಹಗಳು ಛಿದ್ರವಾಗಿ ಬಿದ್ದಿವೆ. ಘಟನಾ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಕೆ.ಸುಧಾಕರ್‌ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *