Wednesday, 1st December 2021

ಜೂನ್ 1ರವರೆಗೆ ಕಾಫಿನಾಡು ಲಾಕ್‌ಡೌನ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ 1ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್‌ಡೌನ್ ಮುಂದುವರಿಕೆಯಾಗಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಜನರ ಅಗತ್ಯಗಳಿಗಾಗಿ ಮಾರ್ಗಸೂಚಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ದಿನಸಿ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ರೈತರಿಗಾಗಿ ಗೊಬ್ಬರ, ಬಿತ್ತನೆ ಬೀಜಗಳ ಖರೀದಿಗೆ ಗ್ರಾಮೀಣ ಪ್ರದೇಶದಲ್ಲಿ ಅವಕಾಶ ಒದಗಿಸಿದ್ದು, ಬೆಳಗ್ಗೆ 6 ರಿಂದ 10ರವರೆಗೆ ಮಾತ್ರ ಅವಕಾಶ ನೀಡಿದೆ.

ಹಳ್ಳಿಯಿಂದ ನಗರಗಳ ಕಡೆಗೆ ಸಂಚಾರ ಸಂಪೂರ್ಣ ಬಂದ್ ಮಾಡಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜೂನ್ 1 ರವರೆಗೆ ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ ಮಾಡಿ, ನಗರದ ಪ್ರದೇಶದಲ್ಲಿ ದಿನಸಿ ವಸ್ತುಗಳ ಹೋಂ ಡೆಲಿವರಿಗೆ ಅವಕಾಶ ಕೊಡಲಾಗಿದೆ.