Chikkabalapur News: ಜ.20ರಂದು ಮಹಾಯೋಗಿ ವೇಮನ ಜಯಂತಿ
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿ ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ. ಎನ್. ಮಂಜುಳ ಭಾಗವಹಿಸಲಿದ್ದಾರೆ.
Source : Chikkaballapur Reporter
ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ “ಮಹಾಯೋಗಿ ವೇಮನ ಜಯಂತಿ” ಯನ್ನು ಜ.20 ರಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾಡಳಿತ ಭವನದ 2ನೇ ಮಹಡಿ ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ಶಾಸಕ ಪಿ.ಇ ಪ್ರದೀಪ್ ಈಶ್ವರ್ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರ ಸಭೆ ಅಧ್ಯಕ್ಷ ಎ. ಗಜೇಂದ್ರ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿ ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ. ಎನ್. ಮಂಜುಳ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಚಿಕ್ಕಬಳ್ಳಾಪುರ ತಾಲ್ಲೂಕು ರೆಡ್ಡಿ ಜನಸಂಘದ ಅಧ್ಯಕ್ಷ ಪಾಪಣ್ಣ ರೆಡ್ಡಿ, ಕಾರ್ಯದರ್ಶಿ ರವೀಂದ್ರರೆಡ್ಡಿ ಭಾಗವಹಿಸಲಿದ್ದಾರೆ.ಮುಖ್ಯ ಭಾಷಣಕಾರರಾಗಿ ನಿವೃತ್ತ ಶಿಕ್ಷಕ ಎನ್.ರತ್ನವರ್ಮ ಭಾಗವಹಿಸುವರು.
ತಾಲ್ಲೂಕು ರೆಡ್ಡಿ ಜನಾಂಗದ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯಗಳ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.
*
ಜ.21ರಂದು ಶ್ರೀ ಅಂಬಿಗರ ಚೌಡಯ್ಯ ಜಯಂತಿ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ “ಶ್ರೀ ಅಂಬಿಗರ ಚೌಡಯ್ಯ ಜಯಂತಿ”ಯನ್ನು ಜ.21ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ೨ನೇ ಮಹಡಿ ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಉಪಸ್ಥಿತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ಶಾಸಕ ರಾದ ಪಿ.ಇ ಪ್ರದೀಪ್ ಈಶ್ವರ್ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರ ಸಭೆ ಅಧ್ಯಕ್ಷ ಎ. ಗಜೇಂದ್ರ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿ, ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ. ಎನ್. ಮಂಜುಳ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಬೆಸ್ತರ ಸಂಘದ ಅಧ್ಯಕ್ಷ ಕೆ.ಜಯರಾಮ್, ತಾಲ್ಲೂಕು ಬೆಸ್ತರ ಸಂಘದ ಅಧ್ಯಕ್ಷ ಆರ್.ಎ.ರವಿಕುಮಾರ್ ಭಾಗವಹಿಸಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ಶಿಡ್ಲಘಟ್ಟ ಅಕ್ಷರ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಬಿ.ವಿ ಪ್ರಕಾಶ್ ಭಾಗವಹಿಸುವರು.
ಜಿಲ್ಲಾ ಮತ್ತು ತಾಲ್ಲೂಕು ಬೆಸ್ತರ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಎಲ್ಲಾ ಸಮು ದಾಯಗಳ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.